ನವದೆಹಲಿ: ದೇಶಾದ್ಯಂತ 79 ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ ಮನೆ ಮಾಡಿದೆ. ದೆಹಲಿಯ ಕೆಂಪು ಕೋಟೆಯ ಮೇಲೆ ಪ್ರಧಾನಿ ನರೇಂದ್ರ ಮೋದಿ ಧ್ವಜಾರೋಹಣ ನೆರವೇರಿಸಿ ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ಬೆಳಗ್ಗೆ ರಾಜಘಾಟ್ ಗೆ ಭೇಟಿ ನೀಡಲಿರುವ ಮೋದಿ ಅವರು ಗಾಂಧಿ ಸ್ಮಾರಕಕ್ಕೆ ನಮಿಸಲಿದ್ದಾರೆ. ಬಳಿಕ ಹುತಾತ್ಮ ಯೋಧರ ಸ್ಮಾರಕಕ್ಕೆ ನಮನ ಸಲ್ಲಿಸಿ ಕೆಂಪು ಕೋಟೆಗೆ ತೆರಳಲಿ ಧ್ವಜಾರೋಹಣ ನೆರವೇರಿಸಲಿದ್ದಾರೆ. ರಕ್ಷಣಾ ಪಡೆಗಳಿಂದ ಗೌರವ ವಂದನೆ ಸ್ವೀಕರಿಸಲಿದ್ದಾರೆ.
ಬೆಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಧ್ವಜಾರೋಹಣ ನೆರವೇರಿಸಲಿದ್ದು, ಜಿಲ್ಲಾ ಕೇಂದ್ರಗಳಲ್ಲಿ ಉಸ್ತುವಾರಿ ಸಚಿವರು ಧ್ವಜಾರೋಹಣ ನೆರೆವೇರಿಸಲಿದ್ದಾರೆ. ಎಲ್ಲೆಡೆ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಕೈಗೊಂಡ ಹರ್ ಘರ್ ತಿರಂಗಾ ಸಂಭ್ರಮ ಹೆಚ್ಚಿಸಿದೆ.
ಶಾಲೆ, ಕಾಲೇಜು, ಕಚೇರಿ ಸೇರಿದಂತೆ ಹಲವೆಡೆ ಧ್ವಜಾರೋಹಣಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಕೆಲವು ಕಡೆಗಳಲ್ಲಿ ಮಳೆಯಾಗುತ್ತಿರುವುದರಿಂದ ಮಕ್ಕಳು ಶಾಲೆಗೆ ಹೋಗಲು ತೊಂದರೆಯಾಗಿದೆ.