HomeKarnatakaBIG NEWS: ಸರ್ಕಾರಿ ನೌಕರರ ಮೂಲವೇತನದ ಶೇ.27.5 ರಷ್ಟು ಹೆಚ್ಚಳಕ್ಕೆ ಶಿಫಾರಸು; ಪರಿಶೀಲಿಸಿ ನಿರ್ಧಾರ; 7ನೇ...

BIG NEWS: ಸರ್ಕಾರಿ ನೌಕರರ ಮೂಲವೇತನದ ಶೇ.27.5 ರಷ್ಟು ಹೆಚ್ಚಳಕ್ಕೆ ಶಿಫಾರಸು; ಪರಿಶೀಲಿಸಿ ನಿರ್ಧಾರ; 7ನೇ ವೇತನ ಆಯೋಗದ ವರದಿ ಸ್ವೀಕರಿಸಿದ ಬಳಿಕ ಸಿಎಂ ಹೇಳಿಕೆ

ಬೆಂಗಳೂರು: ರಾಜ್ಯದ 7ನೇ ವೇತನ ಆಯೋಗವು ಸಲ್ಲಿಸಿದ ವರದಿ ಸ್ವೀಕರಿಸಿದ ಸಿಎಂ ಸಿದ್ದರಾಮಯ್ಯ, ವರದಿ ಸ್ವೀಕರಿಸಲಾಗಿದ್ದು, ಮೂಲವೇತನದ ಶೇಕಡ 27.5 ರಷ್ಟು ಹೆಚ್ಚಳ ಮಾಡಲು ಶಿಫಾರಸು ಮಾಡಿದೆ. ಆರ್ಥಿಕ ಇಲಾಖೆಯಿಂದ ವರದಿ ಪರಿಶೀಲಿಸಲಾಗುವುದು ಎಂದು ತಿಳಿಸಿದರು.

ವರದಿಯನ್ನು ಪರಿಶೀಲಿಸಿ ಸರ್ಕಾರ ಸೂಕ್ತ ತೀರ್ಮಾನ ಕೈಗೊಳ್ಳಲಿದೆ. ವೇತನ ಆಯೋಗದ ಅವಧಿಯನ್ನು ಮೂರು ತಿಂಗಳು ವಿಸ್ತರಿಸಲಾಗಿತ್ತು. ಈ ಅವಧಿಯು ಮಾರ್ಚ್ 15ರಂದು ಮುಕ್ತಾಯಗೊಂಡಿದೆ. ನಿನ್ನೆ ನಾನು ಮೈಸೂರಿನಲ್ಲಿದ್ದ ಕಾರಣ ವರದಿ ಸ್ವೀಕರಿಸಲು ಸಾಧ್ಯವಾಗಿರಲಿಲ್ಲ. ಅದಕ್ಕಾಗಿ ಇಂದು ವರದಿಯನ್ನು ಸ್ವೀಕರಿಸಲಾಗಿದೆ ಎಂದರು.

ವರದಿಯಲ್ಲಿ ಕನಿಷ್ಠ ಮೂಲವೇತನವನ್ನು 17000 ರೂ ಗಳಿಂದ 27 ಸಾವಿರ ರೂಗಳಿಗೆ ಹೆಚ್ಚಿಸುವಂತೆ ಶಿಫಾರಸು ಮಾಡಲಾಗಿದೆ. ಇದರೊಂದಿಗೆ ಇನ್ನೂ ಅನೇಕ ಶಿಫಾರಸುಗಳಿದ್ದು ವರದಿಯನ್ನು ಆರ್ಥಿಕ ಇಲಾಖೆಗೆ ನೀಡಲಾಗಿದೆ. ಆರ್ಥಿಕ ಇಲಾಖೆಯು ವರದಿಯನ್ನು ಕೂಲಂಕಷವಾಗಿ ಅಧ್ಯಯನ ಮಾಡಿದ ನಂತರ ನೀಡುವ ಸಲಹೆಗಳ ಆಧಾರದಲ್ಲಿ ಸರ್ಕಾರ ತೀರ್ಮಾನ ಕೈಗೊಳ್ಳಲಿದೆ ಎಂದು ತಿಳಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular