ಬೆಳಗಾವಿ: ವಿಶೇಷ ಚೇತನ ರಾಜ್ಯ ಸರ್ಕಾರಿ ನೌಕರರಿಗೆ ವಾಹನ ಖರೀದಿಗೆ ಪ್ರಸ್ತುತ ನೀಡಲಾಗುತ್ತಿರುವ ಸಹಾಯಧನದ ಪರಿಷ್ಕರಣೆಯನ್ನೂ ಒಳಗೊಂಡಂತೆ ಸರ್ಕಾರಿ ನೌಕರರಿಗೆ ಲಭ್ಯವಿರುವ ವಿವಿಧ ಭತ್ಯೆ ಮತ್ತು ಸೌಲಭ್ಯಗಳ ಪರಿಷ್ಕರಣೆ ಕುರಿತಂತೆ ರಾಜ್ಯ 7ನೇ ವೇತನ ಆಯೋಗವು ಸರ್ಕಾರಕ್ಕೆ ಸಲ್ಲಿಸಿರುವ ಸಂಪುಟ-1ರ ವರದಿಯಲ್ಲಿನ ಶಿಫಾರಸ್ಸುಗಳು ಪ್ರಸ್ತುತ ಸರ್ಕಾರದ ಪರಿಶೀಲನೆಯಲ್ಲಿದೆ ಎಂದು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ತಿಳಿಸಿದ್ದಾರೆ.
ವಿಧಾನ ಪರಿಷತ್ತಿನಲ್ಲಿ ಮಾಹಿತಿ ನೀಡಿದ ಸಿಎಂ ಸಿದ್ದರಾಮಯ್ಯ, 7ನೇ ರಾಜ್ಯ ವೇತನ ಆಯೋಗದ ಮೊದಲನೇ ವರದಿಯಲ್ಲಿನ ಶಿಫಾರಸ್ಸುಗಳ ಬೆಳಕಿನಲ್ಲಿ ರಾಜ್ಯ ಸರ್ಕಾರಿ ನೌಕರರ ವೇತನ, ವೇತನ ಸಂಬಂಧಿತ ಭತ್ಯೆ ಹಾಗೂ ಪಿಂಚಣಿಯನ್ನು ಪರಿಷ್ಕರಿಸಿ ದಿನಾಂಕ 01.08.2024ರಿಂದ ಅನ್ವಯವಾಗುವಂತೆ ಅನುಮೋದನೆಗೊಳಿಸಲಾಗಿದೆ ಎಂದು ತಿಳಿಸಿದರು.
