ಅಹಮದಾಬಾದ್ ಪಟಾಕಿ ಕಾರ್ಖಾನೆ ಸ್ಫೋಟದಲ್ಲಿ ಜೀವಹಾನಿಗೆ ಪ್ರಧಾನಿ ನರೇಂದ್ರ ಮೋದಿ ಶನಿವಾರ ಸಂತಾಪ ಸೂಚಿಸಿದ್ದು, ಮೃತರ ಹತ್ತಿರದ ಸಂಬಂಧಿಕರಿಗೆ 2 ಲಕ್ಷ ರೂ.ಗಳ ಪರಿಹಾರ ಮತ್ತು ಗಾಯಾಳುಗಳಿಗೆ 50,000 ರೂ.ಗಳ ಪರಿಹಾರವನ್ನು ಘೋಷಿಸಿದ್ದಾರೆ.
ಘಟನೆಯಿಂದ “ತುಂಬಾ ದುಃಖಿತನಾಗಿದ್ದೇನೆ” ಎಂದು ಪ್ರಧಾನಿ ಮೋದಿ ಹೇಳಿದ್ದಾರೆ ಮತ್ತು ದುಃಖಿತ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದಾರೆ. ಅವಘಡದಲ್ಲಿ ಗಾಯಗೊಂಡವರು ಅವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸಿದರು.
ಮೃತಪಟ್ಟ ಪ್ರತಿಯೊಬ್ಬರ ಹತ್ತಿರದ ಸಂಬಂಧಿಕರಿಗೆ PMNRF ನಿಂದ 2 ಲಕ್ಷ ರೂ.ಗಳ ಪರಿಹಾರವನ್ನು ಪ್ರಧಾನಿ ಮೋದಿ ಘೋಷಿಸಿದರು, ಗಾಯಗೊಂಡವರಿಗೆ ತಲಾ 50,000 ರೂ.ಗಳ ಪರಿಹಾರ ನೀಡಲಾಗುವುದು. ಘಟನೆಯಿಂದ ಹಾನಿಗೊಳಗಾದವರಿಗೆ ಸ್ಥಳೀಯ ಆಡಳಿತವು ಸಾಧ್ಯವಿರುವ ಎಲ್ಲ ಸಹಾಯವನ್ನು ನೀಡುತ್ತಿದೆ ಎಂದು ಅವರು ಹೇಳಿದ್ದಾರೆ.
ಶನಿವಾರ ಅಹಮದಾಬಾದ್ನ ಮಹ್ಮದ್ಪುರ ಪ್ರದೇಶದಲ್ಲಿ ಪಟಾಕಿ ಕಾರ್ಖಾನೆಯಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಕನಿಷ್ಠ ಎಂಟು ಜನರು ಸಾವನ್ನಪ್ಪಿದ್ದು, ಐದು ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ವೈದ್ಯಕೀಯ ಚಿಕಿತ್ಸೆಗಾಗಿ ಎಲ್.ಜಿ. ಆಸ್ಪತ್ರೆಗೆ ದಾಖಲಿಸಲಾಗಿದೆ. ರಕ್ಷಣಾ ತಂಡಗಳು ಕಾರ್ಖಾನೆ ಆವರಣದಲ್ಲಿ ಶೋಧ ಮುಂದುವರಿಸುತ್ತಿರುವುದರಿಂದ ಸಾವಿನ ಸಂಖ್ಯೆ ಹೆಚ್ಚಾಗಬಹುದು ಎಂದು ಅಧಿಕಾರಿಗಳು ಹೇಳಿದ್ದಾರೆ.

