HomeIndiaBREAKING: ದೇಶಾದ್ಯಂತ ವಿಧ್ವಂಸಕ ಕೃತ್ಯಕ್ಕೆ ಸಂಚು: 8 ಉಗ್ರರು ಅರೆಸ್ಟ್

BREAKING: ದೇಶಾದ್ಯಂತ ವಿಧ್ವಂಸಕ ಕೃತ್ಯಕ್ಕೆ ಸಂಚು: 8 ಉಗ್ರರು ಅರೆಸ್ಟ್

ನವದೆಹಲಿ: ದೇಶಾದ್ಯಂತ ವಿಧ್ವಂಸಕ ಕೃತ್ಯಕ್ಕೆ ಸಂಚು ರೂಪಿಸಿದ್ದ 8 ಉಗ್ರರನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. ದೇಶದ ವಿವಿಧೆಡೆ ಬಾಂಬ್ ಸ್ಫೋಟಕ್ಕೆ ಇವರು ಸಂಚು ರೂಪಿಸಿದ್ದರು ಎಂಬುದು ಬಯಲಾಗಿದೆ.

ಬಂಧಿತ ಉಗ್ರರಿಗೆ ಪಾಕ್ ಐಎಸ್ ಐ ಮತ್ತು ಬಾಂಗ್ಲಾ ಮೂಲದ ಉಗ್ರ ಸಂಘಟನೆಗಳು ನೆರವು ನೀಡಿತ್ತಿದ್ದವು. ತಮಿಳುನಾಡು ಹಾಗೂ ಪಶ್ಚಿಮ ಬಂಗಾಳದಲ್ಲಿ ನಡೆದ ಜಂಟಿ ಕಾರ್ಯಾಚರಣೆ ವೇಳೆ 8 ಉಗ್ರರನ್ನು ಸೆರೆ ಹಿಡಿಯಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ತಮಿಳುನಾಡಿನ ತಿರುಪ್ಪೂರ್ ನ ಗಾರ್ಮೆಂಟ್ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದ 6 ಉಗ್ರರು ಹಾಗೂ ಪಶ್ಚಿಮ ಬಂಗಾಳದ ವಿವಿಧ ಭಾಗಗಳಲ್ಲಿದ್ದ ಇಬ್ಬರು ಉಗ್ರರನ್ನು ಬಂಧಿಸಲಾಗಿದೆ. ಬಂಧಿತರು ಬಾಂಗ್ಲಾ ಮೂಲದವರಾಗಿದ್ದು, ನಕಲಿ ಆಧಾರ್ ಕಾರ್ಡ್ ಬಳಸಿ ಗುರುತು ಮರೆ ಮಾಚಿದ್ದರು.

ದೆಹಲಿಯ ಕೆಂಪುಕೋಟೆ, ಚಾಂದಿನಿ ಚೌಕ್ ಹಾಗೂ ದೇಗುಲಗಳ ಮೇಲೆ ದಾಳಿ ನಡೆಸಲು ಪ್ಲಾನ್ ಮಾಡಿಕೊಂಡಿದ್ದರು. ಕಾಶ್ಮೀರಿ ಹ್ಯಾಂಡ್ಲರ್ ಗಳು ಬಾಂಗ್ಲಾದೇಶದಲ್ಲಿದ್ದುಕೊಂಡು ಈ ಉಗ್ರರಿಗೆ ನಿರ್ದೇಶನ ನೀಡುತ್ತಿದ್ದರು ಎಂದು ತಿಳಿದುಬಂದಿದೆ.

ಈಗಾಗಲೇ ದೆಹಲಿ ಮೆಟ್ರೋ ನಿಲ್ದಾಣ ಸೇರಿದಂತೆ ಹಲವು ಪ್ರಮುಖ ಸ್ಥಳಗಳಲ್ಲಿ ಫ್ರೀ ಕಾಶ್ಮೀರ್ ಪೋಸ್ಟರ್ ಗಳನು ಅಂಟಿಸಿದ್ದರು. ಬಂಧಿತ ಉಗ್ರರ ಬಳಿ ಇದ್ದ 8 ಮೊಬೈಲ್ ಗಳು, 16 ಸಿಮ್ ಕಾರ್ಡ್ ಗಳನ್ನು ವಶಕ್ಕೆ ಪಡೆಯಲಾಗಿದೆ. ಬಂಧಿತ ಉಗ್ರರು ನಿಷೇಧಿತ ಲಷ್ಕರ್-ಎ-ತೊಯ್ಬಾ ಉಗ್ರ ಸಂಘಟನೆಯೊಂದಿಗೆ ನಿರಂತರ ಸಂಪರ್ಕದಲ್ಲಿದ್ದರು ಎಂದು ತಿಳಿದುಬಂದಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular