HomeKarnatakaBREAKING: ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ: 8 ವರ್ಷದ ಬಾಲಕಿ ಮೇಲೆ ಪಕ್ಕದ ಮನೆಯವನಿಂದಲೇ ಅತ್ಯಾಚಾರ

BREAKING: ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ: 8 ವರ್ಷದ ಬಾಲಕಿ ಮೇಲೆ ಪಕ್ಕದ ಮನೆಯವನಿಂದಲೇ ಅತ್ಯಾಚಾರ

ಬೀದರ್: 8 ವರ್ಷದ ಬಾಅಲಕಿ ಮೇಲೆ ಪಕ್ಕದ ಮನೆಯ ದುರುಳನೊಬ್ಬ ಅತ್ಯಾಚಾರವೆಸಗಿರುವ ಹೇಯ ಘಟನೆ ಬೀದರ್ ಜಿಲ್ಲೆಯ ಗ್ರಾಮವೊಂದರಲ್ಲಿ ನಡೆದಿದೆ.

ಬಾಲಕಿಯ ನೆರೆಮನೆಯವನೇ ಆಗಿರುವ 35 ವರ್ಷದ ಧನರಾಜ್ ಕಾಂಬಳೆ ಅತ್ಯಾಚಾರ ಎಸಗಿರುವ ಆರೋಪಿ. ತಾಯಿಯನ್ನು ಕಳೆದುಕೊಂಡು ತಬ್ಬಲಿಯಾಗಿದ್ದ ಬಾಲಕಿ ಮೇಲೆ ದುಷ್ಟ ಅಟ್ಟಹಾಸ ಮೆರೆದಿದ್ದಾನೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ತಂದೆ ಮಗಳೊಬ್ಬಳನ್ನೇ ಮನೆಯಲ್ಲಿ ಬಿಟ್ಟು ಕೆಲಸಕ್ಕೆ ಹೋಗಿದ್ದರು. ಈ ವೇಳೆ ಪಕ್ಕದ ಮನೆಯ ಧನರಾಜ್ ಬಾಲಕಿಯನ್ನು ನಂಬಿಸಿ ತನ್ನ ಮನೆಗೆ ಕರೆದುಕೊಂಡು ಹೋಗಿದ್ದಾನೆ. ಈ ವೇಳೆ ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದಾನೆ.

ಸದ್ಯ ಬಾಲಕಿಯನ್ನು ಬೀದರ್‌ನ ಬ್ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಂತ್ರಸ್ತ ಬಾಲಕಿಯ ತಂದೆ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ದೂರಿನನ್ವಯ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular