BIG NEWS: ಆಫ್ಘಾನಿಸ್ತಾನದ ಶಾಲೆಯಲ್ಲಿ ವಿಷಪ್ರಾಶನ; 80 ವಿದ್ಯಾರ್ಥಿನಿಯರು ಅಸ್ವಸ್ಥ

ಅಫ್ಘಾನಿಸ್ತಾನದ ಶಾಲೆಯೊಂದರಲ್ಲಿ ವಿಷಪ್ರಾಶನ ಬಳಿಕ 80 ವಿದ್ಯಾರ್ಥಿನಿಯರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ . ವರದಿಗಳ ಪ್ರಕಾರ ಉತ್ತರದ ಸರ್-ಎ-ಪುಲ್ ಪ್ರಾಂತ್ಯದಲ್ಲಿ ಶನಿವಾರ ಮತ್ತು ಭಾನುವಾರದಂದು ಈ ಘಟನೆ ಸಂಭವಿಸಿದೆ.

ಪ್ರಾಂತೀಯ ಶಿಕ್ಷಣ ಇಲಾಖೆಯ ನಿರ್ದೇಶಕ ಮೊಹಮ್ಮದ್ ರಹಮಾನಿ ಮಾತನಾಡಿ ಸಂಚರಕ್ ಜಿಲ್ಲೆಯಲ್ಲಿ 1 ರಿಂದ 6 ನೇ ತರಗತಿಯ ವಿದ್ಯಾರ್ಥಿನಿಯರಲ್ಲಿ ವಿಷಪ್ರಾಶನ ಸಂಭವಿಸಿದೆ ಎಂದಿದ್ದಾರೆ.

ನಸ್ವಾನ್-ಎ-ಕಬೋದ್ ಆಬ್ ಶಾಲೆಯಲ್ಲಿ 60 ಮತ್ತು ನಸ್ವಾನ್-ಎ-ಫೈಜಾಬಾದ್ ಶಾಲೆಯಲ್ಲಿ 20 ಮಕ್ಕಳಿಗೆ ವಿಷ ಪ್ರಾಶನವಾಗಿದೆ ಎಂದು ಫಾಕ್ಸ್ ನ್ಯೂಸ್ ವರದಿ ಮಾಡಿದೆ.

ಎರಡೂ ಪ್ರಾಥಮಿಕ ಶಾಲೆಗಳು ಒಂದಕ್ಕೊಂದು ಹತ್ತಿರದಲ್ಲಿದ್ದು ಒಂದರ ನಂತರ ಮತ್ತೊಂದು ಶಾಲೆಯನ್ನ ಗುರಿಯಾಗಿಸಲಾಗಿದೆ. ನಾವು ವಿದ್ಯಾರ್ಥಿನಿಯರನ್ನು ಆಸ್ಪತ್ರೆಗೆ ಸ್ಥಳಾಂತರಿಸಿದ್ದೇವೆ ಮತ್ತು ಈಗ ಅವರೆಲ್ಲರೂ ಚೆನ್ನಾಗಿದ್ದಾರೆ ಎಂದು ಶಿಕ್ಷಣ ಇಲಾಖೆ ಅಧಿಕಾರಿಗಳು ಹೇಳಿದ್ದಾರೆ.

ಇಲಾಖೆಯ ತನಿಖೆಯು ನಡೆಯುತ್ತಿದೆ ಈ ರೀತಿ ಕೃತ್ಯವೆಸೆಯಲು ಮೂರನೇ ವ್ಯಕ್ತಿಗೆ ದ್ವೇಷದಿಂದ ಯಾರೋ ಹಣ ನೀಡಿದ್ದಾರೆ ಎಂದು ಪ್ರಾಥಮಿಕ ವಿಚಾರಣೆಯಲ್ಲಿ ತಿಳಿದುಬಂದಿದೆ ಎಂದು ಪ್ರಾಂತೀಯ ಶಿಕ್ಷಣ ಇಲಾಖೆಯ ನಿರ್ದೇಶಕ ಮೊಹಮ್ಮದ್ ರಹಮಾನಿ ಹೇಳಿದರು. ಫಾಕ್ಸ್ ನ್ಯೂಸ್ ಪ್ರಕಾರ ಹುಡುಗಿಯರು ಹೇಗೆ ವಿಷ ಸೇವಿಸಿದರು ಅಥವಾ ಅವರ ಗಾಯಗಳ ಸ್ವರೂಪದ ಬಗ್ಗೆ ಅವರು ಯಾವುದೇ ಮಾಹಿತಿಯನ್ನು ನೀಡಿಲ್ಲ.

ಆಗಸ್ಟ್ 2021 ರಲ್ಲಿ ತಾಲಿಬಾನ್ ಅಧಿಕಾರಕ್ಕೆ ಬಂದ ನಂತರ ಮತ್ತು ಅಫ್ಘಾನ್ ಮಹಿಳೆಯರು ಮತ್ತು ಹುಡುಗಿಯರ ಹಕ್ಕುಗಳು ಮತ್ತು ಸ್ವಾತಂತ್ರ್ಯಗಳ ಮೇಲೆ ತಮ್ಮ ಶಿಸ್ತುಕ್ರಮವನ್ನು ಪ್ರಾರಂಭಿಸಿದ ನಂತರ ಈ ರೀತಿಯ ಆಕ್ರಮಣವು ಮೊದಲ ಬಾರಿಗೆ ಸಂಭವಿಸಿದೆ ಎಂದು ತಿಳಿದುಬಂದಿದೆ. ವಿಶ್ವವಿದ್ಯಾನಿಲಯ ಸೇರಿದಂತೆ ಆರನೇ ತರಗತಿಯ ನಂತರದ ಶಿಕ್ಷಣದಿಂದ ಹುಡುಗಿಯರನ್ನು ನಿಷೇಧಿಸಲಾಗಿದೆ ಮತ್ತು ಹೆಚ್ಚಿನ ಉದ್ಯೋಗಗಳು ಮತ್ತು ಸಾರ್ವಜನಿಕ ಸ್ಥಳಗಳಿಂದ ಮಹಿಳೆಯರನ್ನು ನಿರ್ಬಂಧಿಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read