HomeKarnatakaಮದುವೆ ಸಮಾರಂಭದಲ್ಲಿ ಐಸ್ ಕ್ರೀಂ ಸೇವಿಸಿದ ಮಕ್ಕಳು ಸೇರಿ 80 ಜನ ಅಸ್ವಸ್ಥ

ಮದುವೆ ಸಮಾರಂಭದಲ್ಲಿ ಐಸ್ ಕ್ರೀಂ ಸೇವಿಸಿದ ಮಕ್ಕಳು ಸೇರಿ 80 ಜನ ಅಸ್ವಸ್ಥ

ರಾಮನಗರ: ಮದುವೆ ಸಮಾರಂಭದಲ್ಲಿ ಐಸ್ ಕ್ರೀಮ್ ಸೇವಿಸಿ 80 ಜನರು ಅಸ್ವಸ್ಥರಾದ ಘಟನೆ ರಾಮನಗರ ಜಿಲ್ಲೆ ಚನ್ನಪಟ್ಟಣದಲ್ಲಿ ನಡೆದಿದೆ.

ಅಸ್ವಸ್ಥರಾದ 50 ಜನರನ್ನು ಮಾಗಡಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. 30 ಜನರಿಗೆ ಚನ್ನಪಟ್ಟಣ, ರಾಮನಗರದ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದ್ದು, ಐಸ್ ಕ್ರೀಂ ಸೇವಿಸಿ ಅಸ್ವಸ್ಥಗೊಂಡವರ ಪೈಕಿ ಬಹುತೇಕರು ಮಕ್ಕಳಾಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮದುವೆ ಸಮಾರಂಭದಲ್ಲಿ ಊಟವಾದ ಬಳಿಕ ಮಕ್ಕಳು ಐಸ್ ಕ್ರೀಮ್ ಸೇವಿಸಿದ್ದರು. ಮದುವೆ ಮುಗಿಸಿ ಹೊರಡುವಾಗ ವಾಂತಿ, ಬೇಧಿ ಕಾಣಿಸಿಕೊಂಡಿದೆ. ಮದುವೆ ಸಮಾರಂಭದಲ್ಲಿ ಅವಧಿ ಮೀರಿದ ಐಸ್ ಕ್ರೀಂ ನೀಡಿರುವ ಶಂಕೆ ವ್ಯಕ್ತವಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular