ಶಿವಮೊಗ್ಗ: ಕಾರ್ಮಿಕ ಇಲಾಖೆಯಲ್ಲಿ ಕಾರ್ಮಿಕರ ಆರೋಗ್ಯ ತಪಾಸಣೆ ಹೆಸರಲ್ಲಿ ಬರೋಬ್ಬರಿ 800 ಕೋಟಿ ರೂಪಾಯಿ ಬೃಹತ್ ಅಕ್ರಮ ನಡೆದಿದೆ. ಕೇವಲ 3 ವರ್ಷದಲ್ಲಿ 800 ಕೋಟಿ ರೂ ಹಣ ದುರ್ಬಳಕೆ ಮಾಡಿಕೊಳ್ಳಲಾಗಿದೆ ಎಂದು ಮಾಅಜಿ ಗೃಹ ಸಚಿವ ಅರಗ ಜ್ಞಾನೇಂದ್ರ ಗಂಭೀರ ಆರೋಪ ಮಾಡಿದ್ದಾರೆ.
ಶಿವಮೊಗ್ಗದಲ್ಲಿ ಮಾತನಾಡಿದಾರಗ ಜ್ಞಾನೇಂದ್ರ, ರಾಜ್ಯದ ನೂರಾರು ಕೋಟಿ ಹಣ ದೆಹಲಿ, ಕೇರಳಕ್ಕೆ ವರ್ಗಾವಣೆ ಆಗಿದೆ. ಕಾಅರ್ಮಿಕ ಇಲಾಖೆಯಲ್ಲಿನ ಈ ಹಗರಣದ ವಿರುದ್ಧ ಬಿಜೆಪಿ ದೊಡ್ಡ ಹೋರಾಟ ಮಾಡಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ.
ರಾಜ್ಯದಲ್ಲಿ 27,13,000 ಕಟ್ಟಡ ಕಾರ್ಮಿಕರ ಆರೋಗ್ಯ ತಪಾಸಣೆ ಮಾಡಲಾಗಿದ್ದು, ಒಬ್ಬ ಕಾರ್ಮಿಕನ ಆರೋಗ್ಯ ತಪಾಸಣೆಗೆ 2,950 ರೂಪಾಯಿ ವೆಚ್ಚವಾಗಿದೆ. ಆ ಮೂಲಕ ಕಾರ್ಮಿಕರ ಆರೋಗ್ಯ ತಪಾಸಣೆ ಹೆಸರಲ್ಲಿ 3 ವರ್ಷದಲ್ಲಿ 800 ಕೋಟಿ ರೂ ಹಣ ಲೂಟಿ ಆಗಿದೆ. ಎಂಟು ಏಜೆನ್ಸಿಗಳ ಮೂಲಕ ಕಾರ್ಮಿಕ ಇಲಾಖೆಯಲ್ಲಿ ಹಣ ದುರ್ಬಳಕೆಯಾಗಿದೆ ಎಂದು ಆರೋಪಿಸಿದರು.
ಈ ಹಗರಣದ ಬಗ್ಗೆ ಈಗಾಗಲೇ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರಿಗೆ ಪತ್ರ ಬರೆದು ದೂರು ನೀಡಿದ್ದೇವೆ. ಆದರೆ ಈ ಬಗ್ಗೆ ಅವರು ಗಮನಹರಿಸುತ್ತಿಲ್ಲ. ಪ್ರಕರಣವನ್ನು ಸಿಬಿಐ ಅಥವಾ ಇ.ಡಿ ತನಿಖೆಗೆ ನೀಡಬೇಕು. ಹಗರಣದಲ್ಲಿ ಐಎಎಸ್ ಅಧಿಕಾರಿಗಳು ಸೇರಿ ಎಲ್ಲರೂ ಭಾಗಿಯಾಗಿದ್ದಾರೆ. ಈ ಎಲ್ಲರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸುದರು.
ಇಲಾಖೆಯಲ್ಲಿ ಹಗರಣ ನಡೆದರೂ ಮೌನವಾಗಿರುವ ಕಾರ್ಮಿಕ ಸಚಿವ ಸಂತೋಷ್ ಲಾಡ್ ನೈತಿಕ ಹೊಣೆಬ್ ಹೊತ್ತು ರಾಅಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.
ಸಚಿವ ಸಂತೋಷ್ ಲಾಡ್ ಹಗರಣದ ತನಿಖೆಯನ್ನು ಎದುರಿಸಬೇಕು. ಇಲ್ಲದಿದ್ದರೆ ಸರ್ಕಾರದ ವಿರುದ್ಧ ಬಿಜೆಪಿ ದೊಡ್ಡ ಹೋರಾಟ ಮಾಡಲಿದೆ ಎಂದರು.
ಇದೇ ವೇಳೆ ಸ್ಟಿಂಗ್ ಆಪರೇಷನ್ ಬಗ್ಗೆ ಎಚ್ಚರವಹಿಸಲು ಸಿಎಂ ಡಿಕೆ ಶಿವಕುಮಾರ್ ಸಚಿವರಿಗೆ ಸೂಚನೆ ನೀಡಿರುವ ವಿಚಾರವಾಗಿ ಪ್ರತಿಕ್ರಿಯಿಸಿದ ಅರಗ ಜ್ಞಾನೇಂದ್ರ, ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿಕೆ ಹಾಸ್ಯಾಸ್ಪದವಾಗಿದೆ. ಕಾಂಗ್ರೆಸ್ ಸರ್ಕಾರದಲ್ಲಿ ನಿರಂತರ ಭ್ರಷ್ಟಾಚಾರ ನಡೆಯುತ್ತಿದೆ. ಈ ಹಿನ್ನೆಲೆ ಭ್ರಷ್ಟಾಚಾರ ಹೊರಗೆ ಬರದಂತೆ ಸಚಿವರಿಗೆ ಸೂಚನೆ ನೀಡಿದ್ದಾರೆ. ಡಿ.ಕೆ ಶಿವಕುಮಾರ್ ಭಯದಲ್ಲಿದ್ದಾರೆ ಎಂದು ತಿಳಿಸಿದ್ದಾರೆ.
ವಿದ್ಯಾರ್ಥಿಗಳ ಸ್ಕಾಲರ್ಪ್ ಶಿಪ್ ಹಣಕ್ಕಾಗಿ ನಕಲಿ ಸರ್ಟಿಫಿಕೇಟ್ ಸೃಷ್ಟಿಸಿ ದಾಖಲೆ ಸಲ್ಲಿಕೆ: 50 ಅರ್ಜಿ ತಿರಸ್ಕೃತ; ವಿದ್ಯಾರ್ಥಿಗಳ ಕಳ್ಳಾಟ ಬಯಲು
ಕೊಪ್ಪಳ: ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸಮಾಜ ಕಲ್ಯಾಣ ಇಲಾಖೆಯಿಂದ ನೀಡಲಾಗುವ ಪ್ರೋತ್ಸಾಹ ಧನಕ್ಕಾಗಿ ನಕಲಿ ಸೃಷ್ಟಿಫಿಕೇಟ್ ಸೃಷ್ಟಿಸಿ ದಾಅಖಲೆ ಸಲ್ಲಿಸಿರುವ ಘಟನೆ ಕೊಪ್ಪಳದಲ್ಲಿ ಬೆಳಕಿಗೆ ಬಂದಿದೆ.
ಕೊಪ್ಪಳ ಜಿಲ್ಲೆಯಲ್ಲಿ 50ಕ್ಕೂ ಹೆಚ್ಚು ವಿದ್ಯಾರ್ಥಿಗಳು ನಕಲಿ ಅಂಕಪಟ್ಟಿಗಳನ್ನು ಸೃಷ್ಟಿಸಿ ಅರ್ಜಿ ಸಲ್ಲಿಸಿರುವುದು ಬಯಲಾಗಿದೆ. ಝೆರಾಕ್ಸ್ ಅಂಗಡಿಗಳಲ್ಲಿ ಅಂಕಗಳನ್ನು ತಿದ್ದಿ ಪ್ರಥಮ ಶ್ರೇಣಿಯಲ್ಲಿ ತೇರ್ಗಡೆಯಾದಂತೆ ನಕಲಿ ಪ್ರತಿಗಳನ್ನು ಸಲ್ಲಿಸಿರುವ ಕಳ್ಳಾಟ ಬೆಳಕಿಗೆ ಬಂದಿದೆ. ಎಲ್ಲಾ ನಕಲಿ ಅರ್ಜಿಗಳನ್ನು ತಿರಸ್ಕರಿಸಿ ತಪ್ಪು ಎಸಗಿದ ವಿದ್ಯಾರ್ಥಿಗಳಿಗೆ ಇಲಾಖೆಯಿಂದ ಬುದ್ಧಿವಾದ ಹೇಳಿ ಕಳುಹಿಸಲಾಗಿದೆ.
ಪರಿಶಿಷ್ಟ ಜಾತಿಯ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ 30 ಸಾವಿರ ರೂ., ಸ್ನಾತಕ 25 ಸಾವಿರ ರೂ., ಪಿಯುಸಿ 20 ಸಾವಿರ ರೂ., ಎಸ್ಸೆಸ್ಸೆಲ್ಸಿ 15 ಸಾವಿರ ರೂ. ಗಳನ್ನು ಪ್ರೋತ್ಸಾಹ ಧನವನ್ನಾಗಿ ಇಲಾಖೆ ನೀಡುತ್ತಾ ಬಂದಿದೆ. ಪ್ರತಿಭಾನ್ವಿತ ಬಡ ವಿದ್ಯಾರ್ಥಿಗಳಿಗೆ, ಪ್ರಥಮ ಶ್ರೇಣಿಯಲ್ಲಿ ಪಾಸಾಗುವ ವಿದ್ಯಾರ್ಥಿಗಳಿಗೆ ಮುಂದಿನ ಶೈಕ್ಷಣಿಕ ಜೀವನಕ್ಕೆ ಅನುಕೂಲವಾಗಲಿ ಎಂದು ಸಮಾಜ ಕಲ್ಯಾಣ ಇಲಾಖೆಯ ಮೂಲಕ ಸರ್ಕಾರ ಈ ಸ್ಕಾಲರ್ ಶಿಪ್ ಹಣ ವಿತರಿಸುತ್ತದೆ.
ಆದರೆ, 2025-26ನೇ ಹಾಗೂ ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ಪದವಿ ಹಾಗೂ ಸ್ನಾತಕೋತ್ತರ ಪದವಿ ಪರೀಕ್ಷೆಗಳಲ್ಲಿ ಶೇಕಡಾ 60 ಕ್ಕಿಂತ ಹೆಚ್ಚು ಅಂಕಗಳೊಂದಿಗೆ ಉತ್ತೀರ್ಣರಾದಂತೆ ಅಂಕಪಟ್ಟಿ ಗಳನ್ನು ತಿದ್ದಿ, ಹಲವು ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿರುವುದು ಪರಿಶೀಲನೆ ವೇಳೆ ಬೆಳಕಿಗೆ ಬಂದಿದೆ. ನಕಲಿ ಅಂಕಪಟ್ಟಿ ಎಂಬುದು ದೃಢವಾಗುತ್ತಿದ್ದಂತೆಯೇ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಅರ್ಜಿಗಳನ್ನು ತಿರಸ್ಕರಿಸಿದ್ದಾರೆ.
ಪ್ರಥಮ ಶ್ರೇಣಿಯಲ್ಲಿ ಪಾಸಾಗುವ ವಿದ್ಯಾರ್ಥಿಗಳಿಗೆ ಮಾತ್ರ ಪ್ರೋತ್ಸಾಹ ಧನ ನೀಡುವುದರಿಂದ ವಿದ್ಯಾರ್ಥಿಗಳು ಕಡ್ಡಾಯವಾಗಿ ಅರ್ಜಿಯೊಂದಿಗೆ ಅಂಕಪಟ್ಟಿಯ ಝೆರಾಕ್ಸ್ ಪ್ರತಿ ಸಲ್ಲಿಸಿರುತ್ತಾರೆ. ಯುಸಿಎಂಎಸ್‌ನಲ್ಲಿ ವಿದ್ಯಾರ್ಥಿಗಳ ಅಂಕ ಪಟ್ಟಿ ನಂಬರ್ ಹಾಕಿದ ಕೂಡಲೇ ವಾಸ್ತವವಾಗಿ ವಿದ್ಯಾರ್ಥಿ ಪಡೆದಿರುವ ಅಂಕವೆಷ್ಟು ಎಂಬುದು ನಿಖರವಾಗಿ ಗೊತ್ತಾಗಲಿದೆ. ಈ ರೀತಿ ಕಳೆದ ವರ್ಷ ಹಾಗೂ ಪ್ರಸಕ್ತ ಸಾಲಿನಲ್ಲಿ ಬಂದ ಅರ್ಜಿಗಳಲ್ಲಿ ಅಂಕಪಟ್ಟಿ ಪರಿಶೀಲಿಸಿದಾಗ 50ಕ್ಕೂ ಹೆಚ್ಚು ವಿದ್ಯಾರ್ಥಿಗಳು ತಾವು ಪ್ರಥಮ ಶ್ರೇಣಿಯಲ್ಲಿ ಪಾಸಾಗದಿದ್ದರೂ ಪಾಸಾದವರಂತೆ ಅಂಕಪಟ್ಟಿ ತಿದ್ದುಪಡಿ ಮಾಡಿ, ಅರ್ಜಿ ಸಲ್ಲಿಸಿದ್ದಾರೆ. 50 ಅರ್ಜಿಗಳನ್ನು ತಿರಸ್ಕರಿಸಲಾಗಿದೆ. ಇಂತಹ ವಿದ್ಯಾಅರ್ಥಿಗಳನ್ನು ಪತ್ತೆ ಮಾಡಿ ಅವರನ್ನು ಕರೆದು ಇನ್ನೊಮ್ಮೆ ಈ ರೀತಿ ತಪ್ಪು ಮಾಡದಂತೆ ಬುದ್ಧಿವಾದ ಹೇಳಿ ಅಧಿಕಾಅರಿಗಳು ಕಳುಹಿಸಿದ್ದಾರೆ.

