HomeKarnatakaಮೂರು ವರ್ಷಗಳಲ್ಲಿ 800 ಸರ್ಕಾರಿ ಶಾಲೆಗಳು ಕೆಪಿಎಸ್ ಗಳಾಗಿ ಮೇಲ್ದರ್ಜೆಗೆ

ಮೂರು ವರ್ಷಗಳಲ್ಲಿ 800 ಸರ್ಕಾರಿ ಶಾಲೆಗಳು ಕೆಪಿಎಸ್ ಗಳಾಗಿ ಮೇಲ್ದರ್ಜೆಗೆ

ಮಕ್ಕಳಿಗೆ ಪೂರ್ವ ಪ್ರಾಥಮಿಕದಿಂದ ದ್ವಿತೀಯ ಪಿಯುವರೆಗೂ ಶಿಕ್ಷಣವನ್ನು ಖಾತ್ರಿಗೊಳಿಸಲು ಒಂದೇ ಸೂರಿನಡಿ ಶಿಕ್ಷಣಕ್ಕಾಗಿ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ತೆರೆಯಲಾಗಿದೆ. ಪ್ರಸ್ತುತ ಇರುವ 309 ಕೆಪಿಎಸ್ ಗಳಲ್ಲಿ 2,72,464 ವಿದ್ಯಾರ್ಥಿಗಳು ಇದ್ದಾರೆ. ಮೂರು ವರ್ಷಗಳಲ್ಲಿ 800 ಸರ್ಕಾರಿ ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಶಾಲೆಗಳಾಗಿ ಮೇಲ್ದರ್ಜೆಗೇರಿಸಲಾಗುತ್ತಿದೆ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ತಿಳಿಸಿದ್ದಾರೆ.

ಒಂದನೇ ತರಗತಿಯಿಂದಲೇ ಕಂಪ್ಯೂಟರ್ ಶಿಕ್ಷಣ ನೀಡುತ್ತಿದ್ದು, ಪ್ರೌಢಶಾಲಾ ಹಂತದಲ್ಲಿಯೇ ಕೌಶಲ ತರಬೇತಿ ಕಡ್ಡಾಯಗೊಳಿಸಲಾಗುತ್ತಿದೆ. 2026- 27 ನೇ ಸಾಲಿನಿಂದ ಎಲ್ಲಾ ಕೆಪಿಎಸ್ ಶಾಲೆಗಳಲ್ಲಿ ಎಲ್.ಕೆ.ಜಿ.ಯಿಂದ 5ನೇ ತರಗತಿಯವರೆಗೆ ಏಕ ತರಗತಿ ಪಠ್ಯಪುಸ್ತಕ ಆಧಾರಿತ ದ್ವಿಭಾಷಾ ಮಾಧ್ಯಮ ಬೋಧನೆ ಅಳವಡಿಸಲಾಗುತ್ತಿದೆ. 6ನೇ ತರಗತಿಯಿಂದ ಆಂಗ್ಲ ಮಾಧ್ಯಮ ಆರಂಭಿಸಲಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular