HomeKarnatakaGOOD NEWS : ರಾಜ್ಯದಲ್ಲಿ ಶೀಘ್ರವೇ  8000 ಪೊಲೀಸ್ ಕಾನ್’ಸ್ಟೇಬಲ್ ಗಳ ಹುದ್ದೆಗಳ ಭರ್ತಿ ;...

GOOD NEWS : ರಾಜ್ಯದಲ್ಲಿ ಶೀಘ್ರವೇ  8000 ಪೊಲೀಸ್ ಕಾನ್’ಸ್ಟೇಬಲ್ ಗಳ ಹುದ್ದೆಗಳ ಭರ್ತಿ ; ಗೃಹ ಸಚಿವ ಜಿ.ಪರಮೇಶ್ವರ್

ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದೆ. ಹೊಸದಾಗಿ ನೇಮಕ ಮಾಡಲಾಗುವ ಒಟ್ಟು 56 ಸಾವಿರ ಸರ್ಕಾರಿ ಹುದ್ದೆಗಳಲ್ಲಿ, 8 ಸಾವಿರ ಪೊಲೀಸ್ ಕಾನ್ಸ್‌ಟೇಬಲ್‌ಗಳನ್ನು ನೇಮಕ ಮಾಡಲು ನಿರ್ಧರಿಸಲಾಗಿದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ವಿಧಾನಪರಿಷತ್ತಿನಲ್ಲಿ ತಿಳಿಸಿದ್ದಾರೆ.

ಬಿಜೆಪಿಯ ಕಿಶೋರ್ ಕುಮಾರ್ ಪುತ್ತೂರು ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಇಲಾಖೆಯಲ್ಲಿನ ಖಾಲಿ ಹುದ್ದೆಗಳನ್ನು ಹಂತ-ಹಂತವಾಗಿ ಭರ್ತಿ ಮಾಡಲಾಗುತ್ತಿದೆ ಎಂದರು.ಈಗಾಗಲೇ 545 ಪಿಎಸ್‌ಐ (PSI) ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಪೂರ್ಣಗೊಂಡಿದ್ದು, ಅಭ್ಯರ್ಥಿಗಳ ತರಬೇತಿಯೂ ಮುಗಿದಿದೆ. ಅವರನ್ನು ಒಂದು ವಾರದೊಳಗೆ ಕರ್ತವ್ಯಕ್ಕೆ ನಿಯೋಜಿಸಲಾಗುವುದು. ಇದರೊಂದಿಗೆ 402 ಪಿಎಸ್‌ಐ ಹುದ್ದೆಗಳ ತರಬೇತಿಯು ಮುಂದಿನ ಎರಡು ತಿಂಗಳಲ್ಲಿ ಪೂರ್ಣಗೊಳ್ಳಲಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.

ಇಲಾಖೆಯಲ್ಲಿನ ಖಾಲಿ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಳ್ಳುತ್ತಿದೆ. 545 ಪಿಎಸ್‌ಐ ನೇಮಕಾತಿ ಪ್ರಕ್ರಿಯೆ ಪೂರ್ಣಗೊಂಡು, ತರಬೇತಿಯೂ ಮುಗಿದಿದೆ. ವಾರದಲ್ಲಿ ಅವರನ್ನು ಕರ್ತವ್ಯಕ್ಕೆ ನಿಯೋಜಿಸಲಾಗುವುದು. ಜೊತೆಗೆ 402 ಪಿಎಸ್‌ಐಗಳ ತರಬೇತಿ ಇನ್ನೆರಡು ತಿಂಗಳಲ್ಲಿ ಪೂರ್ಣಗೊಳ್ಳಲಿದೆ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular