HomeKarnatakaಮಂಡ್ಯದಲ್ಲಿ87ನೇ ʻಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನʼಕ್ಕೆ ಮುಹೂರ್ತ ಫಿಕ್ಸ್

ಮಂಡ್ಯದಲ್ಲಿ87ನೇ ʻಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನʼಕ್ಕೆ ಮುಹೂರ್ತ ಫಿಕ್ಸ್

ಬೆಂಗಳೂರು : ಮಂಡ್ಯದಲ್ಲಿ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ನಡೆಯಿತು.

ಮಂಡ್ಯದಲ್ಲಿ ಜೂನ್‌ 7, 8 ಮತ್ತು 9ರಂದು 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಗರುವಾರ ನಡೆಗ ಪೂರ್ವಭಾವಿ ಸಭೆಯಲ್ಲಿ ತೀರ್ಮಾನಿಸಲಾಗಿದೆ.

87ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಅದ್ದೂರಿ ಎನ್ನುವುದಕ್ಕಿಂತ ಅರ್ಥಪೂರ್ಣವಾಗಿ ಆಚರಣೆ ಮಾಡಬೇಕು.  ಜಿಲ್ಲಾಡಳಿತದ ಸಹಕಾರದೊಂದಿಗೆ ಸಮ್ಮೇಳನ ಆಯೋಜಿಸಬೇಕು ಹಾಗೂ ಕನ್ನಡ ಸಂಘಟನೆಗಳನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಜೂನ್‌ 7, 8 ಮತ್ತು 9ರಂದು ಸಮ್ಮೇಳನ ಆಯೋಜಿಸಬೇಕು, ಸಮ್ಮೇಳನಾಧ್ಯಕ್ಷರನ್ನು ಆಯ್ಕೆ ಮಾಡುವಾಗ ಹಿರಿಯರು, ಸಾಹಿತ್ಯ ಕ್ಷೇತ್ರದಲ್ಲಿ ಅಪಾರ ಕೆಲಸ ಮಾಡಿದವರನ್ನು ಪರಿಗಣಿಸಬೇಕು.

For Latest News Updates, Join Our Whatsapp Community🚩
RELATED ARTICLES

Most Popular