HomeIndiaವೇತನ ಹೆಚ್ಚಳ ನಿರೀಕ್ಷೆಯಲ್ಲಿದ್ದ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: 8ನೇ ವೇತನ ಆಯೋಗ ರಚನೆ ಬಗ್ಗೆ...

ವೇತನ ಹೆಚ್ಚಳ ನಿರೀಕ್ಷೆಯಲ್ಲಿದ್ದ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: 8ನೇ ವೇತನ ಆಯೋಗ ರಚನೆ ಬಗ್ಗೆ ಸಂಸತ್ ಗೆ ನಿರ್ಮಲಾ ಸೀತಾರಾಮನ್ ಮಾಹಿತಿ

ನವದೆಹಲಿ: ಕೇಂದ್ರ ಸರ್ಕಾರಿ ನೌಕರರ ವೇತನ, ಭತ್ಯೆ ಹೆಚ್ಚಳಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ 8ನೇ ವೇತನ ಆಯೋಗ ರಚಿಸಲು ನಿರ್ಧರಿಸಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.

ಲೋಕಸಭೆಯ ಅಧಿವೇಶನದಲ್ಲಿ ಸೋಮವಾರ ಕಲಾಪದ ವೇಳೆ ಸಂಸದರಾದ ಕಂಗನಾ ರಣಾವತ್ ಮತ್ತು ಸಜ್ದಾ ಅಹಮದ್ ಅವರು ಕೇಳಿದ ಪ್ರಶ್ನೆಗೆ ಉತ್ತರ ನೀಡಿದ ಸಚಿವೆ ನಿರ್ಮಲಾ ಸೀತಾರಾಮನ್ ಈ ಮಾಹಿತಿ ನೀಡಿದ್ದಾರೆ.

ಕೇಂದ್ರ ಸರ್ಕಾರಿ ನೌಕರರ ವೇತನ ಮತ್ತು ಪಿಂಚಣಿ ಪರಿಷ್ಕರಣೆಗಾಗಿ ಕೇಂದ್ರ ಸರ್ಕಾರ 8ನೇ ವೇತನ ಆಯೋಗ ರಚಿಸಿದೆಯೇ ಎಂದು ಪ್ರಶ್ನೆ ಕೇಳಲಾಗಿದ್ದು, ಇದಕ್ಕೆ ಸಚಿವರು ಉತ್ತರ ನೀಡಿ, 8ನೇ ವೇತನ ಆಯೋಗ ರಚಿಸಲು ಸರ್ಕಾರ ನಿರ್ಧರಿಸಿದ್ದು, ಈ ನಿಟ್ಟಿನಲ್ಲಿ ಸೂಕ್ತ ಸಮಯದಲ್ಲಿ ತೀರ್ಮಾನಿಸಲಾಗುವುದು. ಎಂಟನೇ ವೇತನ ಆಯೋಗದ ಶಿಫಾರಸು ಕೈಗೊಂಡು ಅಂಗೀಕರಿಸಿದ ನಂತರ ಅದರ ಪರಿಣಾಮವನ್ನು ಮೌಲ್ಯಮಾಪನ ಮಾಡಬಹುದು ಎಂದು ಸಚಿವರು ಮಾಹಿತಿ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular