9 ಪ್ರಶ್ನೆಗಳನ್ನು ಮುಂದಿಟ್ಟ ರೋಹಿಣಿ ಸಿಂಧೂರಿ ಅಭಿಮಾನಿಗಳು; ‘ಉತ್ತರ ಕೊಡಿ ರೂಪ ಅವ್ರೇ’ ಎಂದು ಒತ್ತಾಯ

ಐಪಿಎಸ್ ಅಧಿಕಾರಿ ಡಿ. ರೂಪಾ ಹಾಗೂ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರ ನಡುವಿನ ವಾಕ್ಸಮರ ಈಗ ಮುಗಿಲು ಮುಟ್ಟಿದ್ದು, ತೀರಾ ವೈಯಕ್ತಿಕ ಮಟ್ಟಕ್ಕಿಳಿದು ಆರೋಪ – ಪ್ರತ್ಯಾರೋಪ ಮಾಡುತ್ತಿದ್ದಾರೆ. ಇದು ಈಗಲೂ ಮುಂದುವರೆದಿದ್ದು, ಇದರ ಮಧ್ಯೆ ರೋಹಿಣಿ ಸಿಂಧೂರಿ ಆರ್ಗನೈಸೇಷನ್ ಎಂಬ ಟ್ವಿಟ್ಟರ್ ಖಾತೆಯಿಂದ 9 ಪ್ರಶ್ನೆಗಳನ್ನು ಮುಂದಿಡಲಾಗಿದೆ.

ಉತ್ತರ ಕೊಡಿ ರೂಪ ಅವರೇ ಎಂಬ ಹ್ಯಾಶ್ ಟ್ಯಾಗ್ ಬಳಸಿ ಈ ಪ್ರಶ್ನೆಗಳನ್ನು ಕೇಳಲಾಗಿದ್ದು, ಇದು ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಐಪಿಎಸ್ ಅಧಿಕಾರಿ ರೂಪಾ ಅವರಿಗೆ ಕೇಳಿದ ಪ್ರಶ್ನೆಗಳ ವಿವರ ಇಂತಿದೆ.

ಚಾಮರಾಜನಗರ ಆಕ್ಸಿಜನ್ ದುರಂತದಲ್ಲಿ ರೋಹಿಣಿ ಸಿಂಧೂರಿ ಅವರದ್ದು ಏನೂ ತಪ್ಪಿಲ್ಲ ಎಂದು ಈಗಾಗಲೇ ಎಲ್ಲರಿಗೂ ತಿಳಿದಿದ್ದು, ಮತ್ತೆ ಮತ್ತೆ ನೀವು ಅವರ ಮೇಲೆ ಆರೋಪ ಹೊರಿಸುತ್ತಿರುವುದು ಏಕೆ ಡಿ. ರೂಪಾರವರೇ?

ಹಿರಿಯ ಐಪಿಎಸ್ ಅಧಿಕಾರಿಯಾದ ತಮ್ಮ ಗಮನಕ್ಕೆ ಈ ಆದೇಶ ಬಂದಿಲ್ಲವೇ ಡಿ. ರೂಪಾರವರೇ?

ತಮ್ಮ ಟ್ವೀಟ್‍ನಲ್ಲಿ ಶಿಲ್ಪಾನಾಗ್ ಅವರನ್ನು ‘ಕನ್ನಡತಿ’ ಎಂದು ಹೈಲೈಟ್ ಮಾಡಿರುವ ತಾವು, ಸಿಂಧೂರಿಯವರು ಎಂದಾದರೂ ಕನ್ನಡಿಗರನ್ನು ದ್ವೇಷಿಸಿದ್ದನ್ನು ನೋಡಿದ್ದೀರಾ? ಅವರು ಯಾವುದೇ ವೇದಿಕೆ ಮೇಲೆ ತೆಲುಗಿನಲ್ಲಿ ಭಾಷಣ ಮಾಡಿದ್ದನ್ನು ನೋಡಿದ್ದೀರಾ?

ತಾವು ನಿನ್ನೆ ಪಬ್ಲಿಕ್‍ಟಿವಿಯೊಂದಿಗೆ ಮಾತನಾಡುವಾಗ ‘ರೋಹಿಣಿಗೂ ನನಗೂ ಹೋಲಿಸಬೇಡಿ ಎಂದಿದ್ರಿ, ಇಷ್ಟೆಲ್ಲಾ ನಡೆದರೂ ‘ಎಂದಿನಂತೆ ಶ್ರದ್ಧೆಯಿಂದ ಕೆಲಸ ಮಾಡ್ತೀನಿ’ ಎನ್ನುವ ಅವರೆಲ್ಲಿ.? ಮಾಧ್ಯಮಗಳ ಗಮನ ತಮ್ಮೆಡೆಗೆ ಪ್ರಯತ್ನಿಸುತ್ತಿರುವ ನೀವೆಲ್ಲಿ?

ಮೈಸೂರಿನ ಡಿಸಿ ನಿವಾಸದ ಈಜುಕೊಳ ನಿರ್ಮಾಣದ ಯೋಜನೆ ಮತ್ತು ಯೋಚನೆ ಎರಡು ನನ್ನದಲ್ಲ ಎಂದು ಸಿಂಧೂರಿಯವರು ಸ್ಪಷ್ಟಪಡಿಸಿದ್ದು ತಮ್ಮ ಗಮನಕ್ಕೆ ಬಂದಿಲ್ಲವೇ ಮೇಡಂ?

ಗಾಯಕ ಲಕ್ಕಿ ಅಲಿ ಜಮೀನಿಗೂ ಮತ್ತು ನನಗೂ ಯಾವುದು ಸಂಬಂಧ ಇಲ್ಲ ಎಂದು ಸಿಂಧೂರಿಯವರು ಸ್ಪಷ್ಟಪಡಿಸಿದ್ದಾರೆ, ಅವರ ಕುಟುಂಬದ ಯಾರ ಮೇಲೆ ಆರೋಪ ಬಂದರೂ, ಸಿಂಧೂರಿಯವರ ಮೇಲೆ ನೇರ ಆರೋಪ ಹೊರಿಸುವುದು ಏಕೆ?

ಎಲ್ಲಾ ಕನ್ನಡಿಗರಿಗೆ ತಮ್ಮ ಮೇಲೆ ಅಪಾರ ಗೌರವವಿದೆ, ಕನ್ನಡದ ಎಲ್ಲಾ ಹೆಣ್ಣು ಮಕ್ಕಳಿಗೆ ತಾವೇ ದೊಡ್ಡ ಸ್ಪೂರ್ತಿ, ಇದರ ನಡುವೆ ಕರ್ನಾಟಕ ಸರ್ಕಾರದ ಹಿರಿಯ, ಮಹಿಳಾ ಅಧಿಕಾರಿಯನ್ನು ಬೇರೆ ರಾಜ್ಯದವರು ಎಂದು ಹೇಳಿ ನೋವುಂಟು ಮಾಡುವುದು ಸರಿಯೇ? ಬೇರೆ ರಾಜ್ಯಗಳಲ್ಲಿ ಕನ್ನಡಿಗರು ಯಾರು ಸೇವೆ ಸಲ್ಲಿಸುತ್ತಿಲ್ಲವೇ?

ಸಿಂಧೂರಿಯವರು ಕರ್ನಾಟಕಕ್ಕೆ ಬಂದ ಆರೇ ತಿಂಗಳಲ್ಲಿ ಕನ್ನಡವನ್ನು ಸ್ಪಷ್ಟವಾಗಿ ಮಾತನಾಡುವುದನ್ನು ಕಲಿತಿದ್ದಾರೆ, ಅವರು ತಮ್ಮ ಕಚೇರಿ ವೇಳೆಯಲ್ಲಿ ಎಂದಾದರೂ ಕನ್ನಡಿಗರನ್ನು ಕಡೆಗಣಿಸಿರುವುದು ತಮ್ಮ ಗಮನಕ್ಕೆ ಬಂದಿದೆಯೇ?

ರೋಹಿಣಿ ಅವರ ಮೇಲೆ ಯಾವುದೇ ಆರೋಪ ಇದ್ದರೂ, ಅದನ್ನು ನೇರವಾಗಿ ಚೀಫ್ ಸೆಕ್ಯೂರೆಟರಿ ಆಫ್ ಕರ್ನಾಟಕ ಹಾಗೂ ಡಿಜಿಪಿ ರವರ ಗಮನಕ್ಕೆ ತರದೆ, ವಾಟ್ಸಪ್ ಸ್ಕ್ರೀನ್‍ಶಾಟ್‍ಗಳಲ್ಲಿ ತೆಗೆದ ಅವರ ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಿದ್ದು ಸರಿಯೇ? ಎಂದು ಪ್ರಶ್ನಿಸಿದ್ದಾರೆ.

https://twitter.com/Rohini_Sindhuri/status/1627504224971132928

https://twitter.com/Rohini_Sindhuri/status/1627493884225007619

https://twitter.com/Rohini_Sindhuri/status/1627493239501778945

https://twitter.com/Rohini_Sindhuri/status/1627490496280166400

https://twitter.com/Rohini_Sindhuri/status/1627489882766716929

https://twitter.com/Rohini_Sindhuri/status/1627489476372205568

https://twitter.com/Rohini_Sindhuri/status/1627488225991458817

https://twitter.com/Rohini_Sindhuri/status/1627486773520789504

https://twitter.com/Rohini_Sindhuri/status/1627486049000890369

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read