ಬೆಂಗಳೂರು : ರಾಜ್ಯಾದ್ಯಂತ ಬುಧವಾರ ನಡೆದ SSLC ಸಮಾಜ ವಿಜ್ಞಾನ ಪರೀಕ್ಷೆಯಲ್ಲಿ ಅಕ್ರಮದಲ್ಲಿ ತೊಡಗಿದ್ದ 9 ವಿದ್ಯಾರ್ಥಿಗಳನ್ನು ಡಿಬಾರ್ ಮಾಡಲಾಗಿದೆ.
ಸಮಾಜ ವಿಜ್ಞಾನ ಪರೀಕ್ಷೆಗೆ 8.27 ಲಕ್ಷ ವಿದ್ಯಾರ್ಥಿಗಳು ಹಾಜರಾಗಿದ್ದು, ಅಕ್ರಮದಲ್ಲಿ ತೊಡ ಗಿದ್ದ 9 ವಿದ್ಯಾರ್ಥಿಗಳನ್ನು ಡಿಬಾರ್ ಮಾಡಲಾಗಿದೆ.
ಪರೀಕ್ಷಾ ಕೊಠಡಿಯಲ್ಲಿ ನಕಲು ಮಾಡುತ್ತಿದ್ದ ರಾಯಚೂರಿನ 3, ಧಾರವಾಡದ 4, ಕಲಬುರಗಿ ಮತ್ತು ಬೆಂಗಳೂರು ದಕ್ಷಿಣ ಶೈಕ್ಷಣಿಕ ಜಿಲ್ಲೆಯ ತಲಾ ಒಬ್ಬ ವಿದ್ಯಾರ್ಥಿಯನ್ನು ಡಿಬಾರ್ ಮಾಡಲಾಗಿದೆ ಎಂದು ತಿಳಿದು ಬಂದಿದೆ. . 8,41,120 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದು. ಈ ಪೈಕಿ 8,27,773 (ಶೇ.98.4) ವಿದ್ಯಾರ್ಥಿಗಳು ಹಾಜರಾಗಿದ್ದರುಮಾ.28 ಮತ್ತು 29 ರಂದು ಯಾವುದೇ ಪರೀಕ್ಷೆ ಇರುವುದಿಲ್ಲ.

