ಗಾಜಾ ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ದಾಳಿ: 90 ಮಂದಿ ಸಾವು

ಉತ್ತರ ಗಾಜಾದ ಜಬಾಲಿಯಾ ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ ಕನಿಷ್ಠ 90 ಪ್ಯಾಲೆಸ್ತೀನಿಯರು ಸಾವನ್ನಪ್ಪಿದ್ದಾರೆ ಮತ್ತು 100 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

ಗಾಜಾ ಆರೋಗ್ಯ ಸಚಿವಾಲಯದ ಪ್ರಕಾರ, ಭಾನುವಾರ ಜಬಾಲಿಯಾ ಪಟ್ಟಣದಲ್ಲಿರುವ ಅಲ್-ಬರ್ಶ್ ಮತ್ತು ಅಲ್ವಾನ್ ಕುಟುಂಬಗಳಿಗೆ ಸೇರಿದ ವಸತಿ ಬ್ಲಾಕ್ ಗಳ ಮೇಲೆ ದಾಳಿ ನಡೆದಿದೆ. ಸತ್ತವರಲ್ಲಿ ಮಹಿಳೆಯರು ಮತ್ತು ಮಕ್ಕಳು ಸೇರಿದ್ದು, ಇನ್ನೂ ಅನೇಕರು ಕಾಣೆಯಾಗಿದ್ದಾರೆ ಎಂದು ಹೇಳಲಾಗಿದೆ.

ಮಕ್ಕಳು ಸೇರಿದಂತೆ ಗಾಯಗೊಂಡ ಅನೇಕರನ್ನು ಹತ್ತಿರದ ವೈದ್ಯಕೀಯ ಕೇಂದ್ರಗಳಿಗೆ ಕರೆದೊಯ್ಯಲಾಗಿದೆ. ಆಸ್ಪತ್ರೆಗಳು ಈಗಾಗಲೇ ರೋಗಿಗಳಿಂದ ತುಂಬಿ ತುಳುಕುತ್ತಿವೆ ಎಂದು ಅಲ್ ಜಜೀರಾ ವರದಿ ಮಾಡಿದೆ.

ಸತ್ತವರಲ್ಲಿ ಪ್ಯಾಲೇಸ್ಟಿನಿಯನ್ ಇಸ್ಲಾಮಿಕ್ ಜಿಹಾದ್ ಗುಂಪಿನ ವಕ್ತಾರ ದಾವೂದ್ ಶೆಹಾಬ್ ಅವರ ಪುತ್ರನೂ ಸೇರಿದ್ದಾನೆ. ಅವಶೇಷಗಳಡಿಯಲ್ಲಿ ಸತ್ತವರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ನಿರಂತರ ದಾಳಿಯಿಂದ ಅವಶೇಷ ತೆಗೆಯಲು ಸಾಧ್ಯವಾಗುತ್ತಿಲ್ಲ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read