ಕೆ-ಸೆಟ್ ಪರೀಕ್ಷೆಗೆ ಶೇ. 90ರಷ್ಟು ಮಂದಿ ಹಾಜರಿ: ಉತ್ತರ ಪತ್ರಿಕೆ ಅಪ್ಲೋಡ್ ಆರಂಭ, ವಾರದಲ್ಲಿ ಕೀ ಉತ್ತರ ಪ್ರಕಟ

ಬೆಂಗಳೂರು: ಪದವಿ ಕಾಲೇಜು ಉಪನ್ಯಾಸಕರ ಅರ್ಹತಾ ಪರೀಕ್ಷೆಯಾದ ಕೆ-ಸೆಟ್ ಭಾನುವಾರ ರಾಜ್ಯದ 11 ಜಿಲ್ಲೆಗಳಲ್ಲಿ ಸುಗಮವಾಗಿ ನಡೆಯಿತು.

ಪರೀಕ್ಷಾ ಅಕ್ರಮಗಳನ್ನು ತಡೆಯಲು ಬಿಗಿ ಕ್ರಮಗಳನ್ನು ಕೈಗೊಂಡಿದ್ದರಿಂದ ಯಾವುದೇ ಅಹಿತಕರ ಘಟನೆಗಳು ವರದಿಯಾಗಿಲ್ಲ.

ಒಟ್ಟು 34 ವಿಷಯಗಳಿಗೆ ನಡೆದ ಕೆ-ಸೆಟ್ ಪರೀಕ್ಷೆಗೆ 1.34 ಲಕ್ಷ ಮಂದಿ ಅರ್ಜಿ ಸಲ್ಲಿಸಿದ್ದರು. ಇವರ ಪೈಕಿ 1.21 ಲಕ್ಷ  (ಶೇ 90) ಮಂದಿ ಹಾಜರಾಗಿದ್ದರು.

ಬೆಂಗಳೂರು, ಬಳ್ಳಾರಿ, ಬೆಳಗಾವಿ, ದಾವಣಗೆರೆ, ಧಾರವಾಡ, ಕಲಬುರ್ಗಿ, ಮಂಗಳೂರು, ಮೈಸೂರು, ಶಿವಮೊಗ್ಗ, ತುಮಕೂರು, ವಿಜಯಪುರ ಜಿಲ್ಲೆಗಳ 316 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಿತು.

ಪರೀಕ್ಷಾ ಕೇಂದ್ರಗಳಿಂದ ಅಭ್ಯರ್ಥಿಗಳ ಉತ್ತರ ಪತ್ರಿಕೆಗಳು ಕೆಇಎ ಕಚೇರಿಗೆ ಬಂದ ತಕ್ಷಣವೇ ಅವುಗಳನ್ನು ಸ್ಕ್ಯಾನ್ ಮಾಡಿ, ವೆಬ್ ಸೈಟ್ ನಲ್ಲಿ ಅಪ್ ಲೋಡ್ ಮಾಡುವ ಕೆಲಸ ಕೂಡ ಸಂಜೆ ವೇಳೆಗೆ ಆರಂಭಿಸಲಾಯಿತು. ಎಲ್ಲ ವಿಷಯಗಳ ಕೀ ಉತ್ತರಗಳನ್ನು ಕೂಡ ಈ ವಾರದಲ್ಲಿ ಪ್ರಕಟಿಸಲಾಗುತ್ತದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್. ಪ್ರಸನ್ನ ಮಾಹಿತಿ ನೀಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read