HomeKarnatakaಸೌಲಭ್ಯಕ್ಕಾಗಿ ‘ಕಾರ್ಡ್’ ಪಡೆದ ಅನರ್ಹರಿಗೆ ಶಾಕ್: ರಾಜ್ಯದಲ್ಲಿ 90 ಸಾವಿರ ನಕಲಿ ಕಾರ್ಮಿಕರ ಕಾರ್ಡ್ ಪತ್ತೆ:...

ಸೌಲಭ್ಯಕ್ಕಾಗಿ ‘ಕಾರ್ಡ್’ ಪಡೆದ ಅನರ್ಹರಿಗೆ ಶಾಕ್: ರಾಜ್ಯದಲ್ಲಿ 90 ಸಾವಿರ ನಕಲಿ ಕಾರ್ಮಿಕರ ಕಾರ್ಡ್ ಪತ್ತೆ: ರದ್ದುಪಡಿಸಲು ಸರ್ಕಾರ ಕ್ರಮ

ಬೆಂಗಳೂರು: ರಾಜ್ಯದಲ್ಲಿ 90 ಸಾವಿರ ನಕಲಿ ಕಾರ್ಮಿಕರ ಕಾರ್ಡ್ ಪತ್ತೆಯಾಗಿದೆ. ಬೀದರ್ ನಲ್ಲಿ ಬರೋಬ್ಬರಿ 26,545 ಕಾರ್ಡ್ ಗಳು ಪತ್ತೆಯಾಗಿದ್ದು, ಅನರ್ಹ ನೋಂದಣಿ ಪತ್ತೆ ಮಾಡಿ ರದ್ದು ಮಾಡಲು ಸರ್ಕಾರ ಕ್ರಮ ಕೈಗೊಂಡಿದೆ.

ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಿಂದ ಕಾರ್ಮಿಕರ ಕಾರ್ಡ್ ಗಳನ್ನು ನೀಡಲಾಗುತ್ತಿದ್ದು, ಸೌಲಭ್ಯ ಪಡೆಯಲು ಅನರ್ಹರು ಕೂಡ ಕಾರ್ಡ್ ಪಡೆದುಕೊಂಡಿದ್ದಾರೆ. ಸರ್ಕಾರ 3 ವರ್ಷದಿಂದ ನೋಂದಣಿ ಮಾಡಿಸಿರುವ 32,77,399 ಕಾರ್ಮಿಕರ ಕಾರ್ಡ್ ಗಳಲ್ಲಿ 90,091 ಕಾರ್ಡ್ ಗಳು ನಕಲಿಯಾಗಿದ್ದು, ಅವುಗಳನ್ನು ರದ್ದುಪಡಿಸಲು ಕ್ರಮ ಕೈಗೊಳ್ಳಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಾರ್ಮಿಕರಲ್ಲದವರು ಕೂಡ ಕಾರ್ಡ್ ಪಡೆದುಕೊಂಡಿದ್ದಾರೆ. ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕರ್ನಾಟಕ ನಿಯಮಕ್ಕೆ ತಿದ್ದುಪಡಿ ತಂದಿದ್ದು, ನಿಯಮದ ಅನ್ವಯ ಅರ್ಹತಾ ಮಾನದಂಡ ಪೂರೈಸದ ಕಾರ್ಮಿಕರ ನೋಂದಣಿ ರದ್ದುಪಡಿಸಲು ನೋಂದಣಿ ಅಧಿಕಾರಿಗಳಿಗೆ ಅಧಿಕಾರ ನೀಡಲಾಗಿದೆ.

ಬೀದರ್ ನಲ್ಲಿ 26545, ಹುಬ್ಬಳ್ಳಿ ಉಪ ವಿಭಾಗ 1ರಲ್ಲಿ 17,119, ಬಾಗಲಕೋಟೆ, ಚಿತ್ರದುರ್ಗ, ಶಿವಮೊಗ್ಗ, ವಿಜಯಪುರ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ನಕಲಿ ಕಾರ್ಮಿಕರ ಕಾರ್ಡ್ ಪಡೆಯಲಾಗಿದೆ. ಪರಿಶೀಲನೆ ನಡೆಸಿ ಕಾರ್ಡ್ ರದ್ದುಪಡಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಸೌಲಭ್ಯ ಪಡೆಯಲು ಯತ್ನಿಸಿದ ಅನರ್ಹರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಲಾಗುವುದು ಎಂದು ಹೇಳಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular