HomeLive Newsಟಿ20 ವಿಶ್ವಕಪ್; ಇಂದು ಫೈನಲ್ ಗಾಗಿ ಹೋರಾಡಲಿವೆ ಭಾರತ ಹಾಗೂ ಇಂಗ್ಲೆಂಡ್

ಟಿ20 ವಿಶ್ವಕಪ್; ಇಂದು ಫೈನಲ್ ಗಾಗಿ ಹೋರಾಡಲಿವೆ ಭಾರತ ಹಾಗೂ ಇಂಗ್ಲೆಂಡ್

ಇಂದು ದಕ್ಷಿಣ ಆಫ್ರಿಕಾ ತಂಡ ಅಫ್ಘಾನಿಸ್ತಾನದ ಎದುರು ಭರ್ಜರಿ ಜಯ ಸಾಧಿಸುವ ಮೂಲಕ ಟಿ20 ವಿಶ್ವಕಪ್ ಫೈನಲ್ ಗೆ ಎಂಟ್ರಿ ಕೊಟ್ಟಿದೆ. ಫೈನಲ್ ಪ್ರವೇಶಿಸಿದ ಸಂತಸದಲ್ಲಿರುವ ದಕ್ಷಿಣ ಆಫ್ರಿಕಾ ತಂಡ ಚೋಕರ್ಸ್ ಪಟ್ಟದಿಂದ ಹೊರಬರಲು ನೋಡುತ್ತಿದೆ.

ಸೆಮಿ ಫೈನಲ್ ನ ಮತ್ತೊಂದು ಪಂದ್ಯದಲ್ಲಿ ಇಂದು ಭಾರತ ಹಾಗೂ ಇಂಗ್ಲೆಂಡ್ ಮುಖಾಮುಖಿಯಾಗಲಿದ್ದು, ಕ್ರಿಕೆಟ್ ಪ್ರೇಮಿಗಳು ಕಾತುರದಿಂದ ಕಾಯುತ್ತಿದ್ದಾರೆ. ಭಾರತ ತಂಡದ ನಾಯಕ ರೋಹಿತ್ ಶರ್ಮಾ ಆಸ್ಟ್ರೇಲಿಯಾ ಎದುರು ಸ್ಪೋಟಕ ಬ್ಯಾಟಿಂಗ್ ಮಾಡುವ ಮೂಲಕ ತಮ್ಮ ಹಳೆಯ ಫಾರ್ಮ್ ಗೆ ಮರಳಿದ್ದು, ಅವರ ಅಭಿಮಾನಿಗಳಲ್ಲಿ ಸಂತಸ ತಂದಿದೆ.

ಮತ್ತೊಂದೆಡೆ ಟೀಮ್ ಇಂಡಿಯಾ ಕೋಚ್ ರಾಹುಲ್ ದ್ರಾವಿಡ್ ಟಿ20 ವಿಶ್ವಕಪ್ ಬಳಿಕ ನಿವೃತ್ತಿ ಘೋಷಿಸಲಿದ್ದು, ಅವರಿಗೋಸ್ಕರವಾದರೂ ಈ ಬಾರಿ ಟಿ ಟ್ವೆಂಟಿ ವಿಶ್ವಕಪ್ ಗೆದ್ದೆ ಗೆಲ್ಲುತ್ತೇವೆ ಎಂದು ರೋಹಿತ್ ಪಡೆ ಈಗಾಗಲೇ ಸಂದರ್ಶನ ಒಂದರಲ್ಲಿ ತಿಳಿಸಿದೆ. ಇಂದು ಬಲಿಷ್ಠ ಇಂಗ್ಲೆಂಡ್ ಎದರು ಭಾರತ ತಂಡ ಯಾವ ರೀತಿ ಪ್ರದರ್ಶನ ತೋರಲಿದೆ ಕಾದು ನೋಡಬೇಕಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular