HomeAutoಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಇಬ್ಬರು ಬಚಾವ್

ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಇಬ್ಬರು ಬಚಾವ್

ಕರ್ನಾಟಕದ ಕರಾವಳಿ ಜಿಲ್ಲೆಗಳು ಹಾಗೂ ಕೇರಳದ ಗಡಿ ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಮಹಾಮಳೆಯಿಂದಾಗಿ ಅವಾಂತರಗಳು ಸೃಷ್ಟಿಯಾಗುತ್ತಿವೆ. ಮಳೆಯ ನಡುವೆ ಚಾಲಕನ ನಿಯಂತ್ರ ತಪ್ಪಿದ ಕಾರು ಸೇತುವೆಯಿಂದ ಹೊಳೆಗೆ ಬಿದ್ದ ಘಟನೆ ಕಾಸರಗೋಡಿನಲ್ಲಿ ನಡೆದಿದೆ.

ತಡೆಗೋಡೆ ಇಲ್ಲದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿದ ಕಾರು ಏಕಾಕಿ ಸೇತುವೆಯಿಂದ ನದಿಗೆ ಹಾರಿದ್ದು, ನೀರಿನ ರಭಸಕ್ಕೆ ಕೊಚ್ಚಿಕೊಂಡು ಹೋಗಿದೆ. ಕಾರಿನಲ್ಲಿದ್ದ ಇಬ್ಬರೂ ನದಿಯಲ್ಲಿ ತೇಲಿ ಬರುತ್ತಿದ್ದ ಮರವನ್ನು ಹಿಡಿದುಕೊಂಡು ಜೀವ ಉಳಿಸಿಕೊಂಡಿದ್ದಾರೆ.

ರಶೀದ್ ಹಾಗೂ ತಸ್ರೀಫ್ ಎಂಬುವವರನ್ನು ರಕ್ಷಿಸಲಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಾರು ನದಿಯಲ್ಲಿ ಸಂಪೂರ್ಣ ಮುಳುಗಿದ್ದರೂ ಅದೃಷ್ಟವಶಾತ್ ಇಬ್ಬರೂ ಬದುಕಿ ಬಂದಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular