ಪಾನಿ ಪೂರಿ ದಕ್ಷಿಣ ಏಶಿಯಾದ ಒಂದು ಜನಪ್ರಿಯ ಹಾಗು ರುಚಿಕರವಾದ ಖಾದ್ಯ. ಭಾರತದಲ್ಲಿ ಪ್ರತಿಯೊಂದು ಊರಲ್ಲೂ ಪಾನಿ ಪೂರಿ ಗಾಡಿಗಳು ಕಾಣಸಿಗುತ್ತವೆ. ಪಾನಿಪುರಿ ದೇಹಕ್ಕೆ ಎಷ್ಟು ಸುರಕ್ಷಿತ ಎಂದು ಕಂಡುಹಿಡಿಯಲು ಆಹಾರ ಇಲಾಖೆ ಅದರ ಮಾದರಿಗಳನ್ನು ಸಂಗ್ರಹ ಮಾಡಿ ಪರೀಕ್ಷೆಗೆ ಒಳಪಡಿಸಿದೆ. ಈ ಪರೀಕ್ಷೆಯಲ್ಲಿ ಪಾನಿಪುರಿ ಗಂಭೀರ ಆರೋಗ್ಯ ಸಮಸ್ಯೆಗಳನ್ನು ಉಂಟು ಮಾಡುತ್ತದೆ ಎಂದು ವರದಿಗಳು ಬಹಿರಂಗಪಡಿಸಿವೆ.
ಹೌದು. ಗೋಬಿ ಮಂಚೂರಿ ಬಳಿಕ ಪಾನಿಪುರಿಯಲ್ಲೂ ಕ್ಯಾನ್ಸರ್ ಕಾರಕ ಅಂಶಗಳು ಇರುವುದು ಪತ್ತೆಯಾಗಿದೆ.
ಈ ಹಿನ್ನೆಲೆ ಬೆಂಗಳೂರಿನ 49 ಕಡೆ ಸ್ಯಾಂಪಲ್ಸ್ ಗಳನ್ನು ಸಂಗ್ರಹಿಸಲಾಗಿದೆ. ವಿವಿಧ ಪಾನಿಪೂರಿ ತಯಾರಿಕೆ ಪದಾರ್ಥಗಳಲ್ಲಿ ಕ್ಯಾನ್ಸರ್ ಕಾರಕ ಅಂಶಗಳು ಇರುವುದು ಪತ್ತೆಯಾಗಿದೆ. ಪಾನಿಪೂರಿಗೆ ಹಾಕುವ ಸಾಸ್ ಮತ್ತು ಮೀಟಾ ಖಾರದ ಪುಡಿಯಲ್ಲಿ ಕ್ಯಾನ್ಸರ್ ಕಾರಕ ಅಂಶಗಳು ಇರುವುದು ಧೃಡವಾಗಿದೆ. ಇನ್ನೊಂದು ವಾರದಲ್ಲಿ ಸಾಸ್ ಮತ್ತು ಮಿಟಾ ಬ್ಯಾನ್ ಆಗುವ ಸಾಧ್ಯತೆಯಿದೆ ಎನ್ನಲಾಗಿದೆ. . ಪಾನಿಪುರಿಯಲ್ಲಿ ಐದು ಕೆಮಿಕಲ್ ಬಳಸುವುದಕ್ಕೆ ನಿರ್ಬಂಧ ಹೇರುವ ಸಾಧ್ಯತೆ ಇದೆ ಎಂದು ಆಹಾರ ಇಲಾಖೆ ಆಯುಕ್ತ ಶ್ರೀನಿವಾಸ್ ಹೇಳಿದ್ದಾರೆ.