HomeIndiaಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಕೇವಲ 74 ಕಿಮೀ ದೂರದ ಹೊಸೂರಿನಲ್ಲಿ ಹೊಸ ಏರ್ ಪೋರ್ಟ್

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಕೇವಲ 74 ಕಿಮೀ ದೂರದ ಹೊಸೂರಿನಲ್ಲಿ ಹೊಸ ಏರ್ ಪೋರ್ಟ್

ಚೆನ್ನೈ: ತಮಿಳುನಾಡು ಸರ್ಕಾರ ಹೊಸೂರಿನಲ್ಲಿ 2,000 ಎಕರೆ ಪ್ರದೇಶದಲ್ಲಿ ವಾರ್ಷಿಕ 30 ಮಿಲಿಯನ್ ಪ್ರಯಾಣಿಕರನ್ನು ನಿಭಾಯಿಸುವ ಸಾಮರ್ಥ್ಯದೊಂದಿಗೆ ಅಂತರರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಸ್ಥಾಪಿಸುವ ಯೋಜನೆಯನ್ನು ಪ್ರಕಟಿಸಿದೆ.

ಕೃಷ್ಣಗಿರಿ ಮತ್ತು ಧರ್ಮಪುರಿ ಜಿಲ್ಲೆಗಳಲ್ಲಿ ಹೆಚ್ಚುತ್ತಿರುವ ಕೈಗಾರಿಕಾ ಅಗತ್ಯಗಳನ್ನು ಬೆಂಬಲಿಸುವ ಗುರಿಯನ್ನು ಈ ಯೋಜನೆ ಹೊಂದಿದೆ ಎಂದು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಗುರುವಾರ ವಿಧಾನಸಭೆಗೆ ತಿಳಿಸಿದ್ದಾರೆ.

ಪ್ರಸ್ತುತ, ತಮಿಳುನಾಡು ಮಧುರೈ, ಚೆನ್ನೈ, ಕೊಯಮತ್ತೂರು ಮತ್ತು ತಿರುಚ್ಚಿಯಲ್ಲಿ ನಾಲ್ಕು ಅಂತರಾಷ್ಟ್ರೀಯ ವಿಮಾನ ನಿಲ್ದಾಣಗಳನ್ನು ಹೊಂದಿದೆ. ಕಾಂಚೀಪುರಂ ಜಿಲ್ಲೆಯ ಪರಂದೂರ್‌ನಲ್ಲಿ 20,000 ಕೋಟಿ ರೂಪಾಯಿ ವೆಚ್ಚದಲ್ಲಿ ಗ್ರೀನ್‌ಫೀಲ್ಡ್ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಭೂಸ್ವಾಧೀನ ವೇಗವಾಗಿ ಮುಂದುವರಿಯುತ್ತಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬೆಂಗಳೂರಿನಲ್ಲಿ ಎರಡನೇ ವಿಮಾನ ನಿಲ್ದಾಣ ನಿರ್ಮಾಣದ ಬಗ್ಗೆ ಇತ್ತೀಚೆಗಷ್ಟೇ ಚರ್ಚೆ ನಡೆದಿರುವ ಹೊತ್ತಲ್ಲಿ ತಮಿಳುನಾಡು ಸಿಎಂ ಹೊಸೂರಿನಲ್ಲಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣದ ಬಗ್ಗೆ ಘೋಷಿಸಿದ್ದಾರೆ.

ಹೊಸೂರು ಮಾತ್ರವಲ್ಲದೆ ಪ್ರದೇಶದ ಒಟ್ಟಾರೆ ಸಾಮಾಜಿಕ-ಆರ್ಥಿಕ ಅಭಿವೃದ್ಧಿಗೆ ಚಾಲನೆ ನೀಡಲು ವಿಮಾನ ನಿಲ್ದಾಣ ನಿರ್ಮಿಸುವುದಾಗಿ ಮುಖ್ಯಮಂತ್ರಿ ಸ್ಟಾಲಿನ್ ಹೇಳಿದ್ದಾರೆ. ಹೊಸೂರಿನಲ್ಲಿ 2,000 ಎಕರೆ ಪ್ರದೇಶದಲ್ಲಿ ವಾರ್ಷಿಕ 30 ಮಿಲಿಯನ್ ಪ್ರಯಾಣಿಕರನ್ನು ನಿಭಾಯಿಸುವ ಸಾಮರ್ಥ್ಯವಿರುವ ಅಂತರರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಸ್ಥಾಪಿಸಲಾಗುವುದು ಎಂಬ ಸಿಎಂ ಘೋಷಣೆಗೆ ಸದನದಲ್ಲಿ ವಿವಿಧ ರಾಜಕೀಯ ಪಕ್ಷಗಳಿಂದ ವ್ಯಾಪಕ ಅನುಮೋದನೆ ದೊರೆಯಿತು.

ತಮಿಳುನಾಡು ಸರ್ಕಾರದ ಹೊಸೂರು ವಿಮಾನ ನಿಲ್ದಾಣ ಯೋಜನೆಗೆ ಕೇಂದ್ರದ ಪ್ರಸ್ತುತ ನೀತಿ ಸಂಭಾವ್ಯ ಅಡ್ಡಿಯಾಗಿದೆ. ಅಸ್ತಿತ್ವದಲ್ಲಿರುವ ವಿಮಾನ ನಿಲ್ದಾಣದ 150-ಕಿಮೀ ವ್ಯಾಪ್ತಿಯೊಳಗೆ ಹೊಸ ವಿಮಾನ ನಿಲ್ದಾಣಗಳನ್ನು ಅನುಮತಿಸುವುದಿಲ್ಲ. ಹೊಸೂರು ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಕೇವಲ 74 ಕಿಮೀ ದೂರದಲ್ಲಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular