HomeKarnatakaBREAKING: ರಾಜ್ಯದಲ್ಲಿ ಘೋರ ದುರಂತ: ಹಾವೇರಿಯಲ್ಲಿ ಭೀಕರ ಅಪಘಾತದಲ್ಲಿ 10 ಜನ ಸಾವು

BREAKING: ರಾಜ್ಯದಲ್ಲಿ ಘೋರ ದುರಂತ: ಹಾವೇರಿಯಲ್ಲಿ ಭೀಕರ ಅಪಘಾತದಲ್ಲಿ 10 ಜನ ಸಾವು

ಹಾವೇರಿ: ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತದಲ್ಲಿ 10 ಜನ ಸಾವನ್ನಪ್ಪಿದ್ದಾರೆ. ಹಾವೇರಿ ಜಿಲ್ಲೆ ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿ ಕ್ರಾಸ್ ಬಳಿ ಅಪಘಾತ ಸಂಭವಿಸಿದೆ.

ನಿಂತಿದ್ದ ಲಾರಿಗೆ ಟಿಟಿ ವಾಹನ ಡಿಕ್ಕಿಯಾಗಿ ದುರಂತ ಸಂಭವಿಸಿದೆ. ಸವದತ್ತಿ ಯಲ್ಲಮ್ಮನ ದರ್ಶನಕ್ಕೆ ಹೋಗುತ್ತಿದ್ದವರು ಮೃತಪಟ್ಟಿದ್ದಾರೆ. ಡಿಕ್ಕಿಯ ರಭಸಕ್ಕೆ ಟಿಟಿ ವಾಹನ ಸಂಪೂರ್ಣ ನಜ್ಜು ಗುಜ್ಜಾಗಿದೆ.

ಹಿಂಬದಿಯಿಂದ ಲಾರಿಗೆ ಟಿಟಿ ವಾಹನ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಮೃತದೇಹಗಳನ್ನು ಹೊರತೆಗೆಯಲು ಪೊಲೀಸರು ಹರಸಾಹಸ ನಡೆಸಿದ್ದಾರೆ. ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ಗಾಯಾಳುಗಳನ್ನು ಹಾವೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಟಿಟಿಯಲ್ಲಿ 15ಕ್ಕೂ ಹೆಚ್ಚು ಮಂದಿ ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular