ಬೆಂಗಳೂರು : ಭಾರತ ಹಿಂದೂ ರಾಷ್ಟ್ರವಲ್ಲ, ಎಲ್ಲರಿಗೂ ಸೇರಿದ ರಾಷ್ಟ್ರವೆಂಬುದಕ್ಕೆ ಲೋಕಸಭಾ ಚುನಾವಣೆಯ ಫಲಿತಾಂಶ ಸಾಕ್ಷಿ ಎಂದು ನೋಬೆಲ್ ಪ್ರಶಸ್ತಿ ಪುರಸ್ಕ್ರತ ಅಮಾರ್ತ್ಯ ಸೇನ್ ಅವರು ಹೇಳಿರುವುದು ಸರಿಯಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ ‘ಭಾರತ ಹಿಂದೂ ರಾಷ್ಟ್ರವಲ್ಲ, ಎಲ್ಲರಿಗೂ ಸೇರಿದ ರಾಷ್ಟ್ರವೆಂಬುದಕ್ಕೆ ಲೋಕಸಭಾ ಚುನಾವಣೆಯ ಫಲಿತಾಂಶ ಸಾಕ್ಷಿ ಎಂದು ನೋಬೆಲ್ ಪ್ರಶಸ್ತಿ ಪುರಸ್ಕ್ರತ ಅಮಾರ್ತ್ಯ ಸೇನ್ ಅವರು ಹೇಳಿರುವುದು ಸರಿಯಿದೆ. ನಾವೂ ಅದನ್ನೇ ಮೊದಲಿನಿಂದಲೂ ಪ್ರತಿಪಾದಿಸುತ್ತಿದ್ದೇವೆ. ಭಾರತ ಬಹುತ್ವದ ದೇಶ, ಯಾವುದೇ ಒಂದು ಸೀಮಿತ ಧರ್ಮಕ್ಕೆ ಸೇರಿದ ರಾಷ್ಟ್ರವಾಗಲು ಸಾಧ್ಯವಿಲ್ಲ. ಹಲವು ಜಾತಿ, ಧರ್ಮ, ಭಾಷೆಯವರು ಇದ್ದು, ಬಹುತ್ವದ ಸಂಸ್ಕೃತಿ ಇರುವ ರಾಷ್ಟವಾಗಿದೆ’ ಎಂದರು.
ಕೆಂಪೇಗೌಡರ ಜೀವನಾದರ್ಶಗಳು ಎಲ್ಲರ ಬಾಳಿಗೆ ಬೆಳಕಾಗಲಿ
ಜಾತಿ, ಧರ್ಮಗಳ ತಾರತಮ್ಯವಿಲ್ಲದೆ ಸರ್ವರ ಕಲ್ಯಾಣಕ್ಕಾಗಿ ದುಡಿದ ನಾಡಿನ ಹೆಮ್ಮೆಯ ನಾಯಕ, ಬೆಂಗಳೂರು ನಗರ ನಿರ್ಮಾತೃ ಕೆಂಪೇಗೌಡರನ್ನು ಅತ್ಯಂತ ಗೌರವದಿಂದ ಸ್ಮರಿಸುವ ಕೆಲಸವನ್ನು ನಮ್ಮ ಸರ್ಕಾರ ಹಿಂದೆಯೂ ಮಾಡಿತ್ತು, ಇಂದೂ ಮಾಡುತ್ತಿದೆ. ಈ ಮೂಲಕ ಕೆಂಪೇಗೌಡರ ಜೀವನಾದರ್ಶಗಳು ಎಲ್ಲರ ಬಾಳಿಗೆ ಬೆಳಕಾಗಲಿ ಎಂಬ ಆಶಯ ನಮ್ಮದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.