ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 17 ನೇ ಆರೋಪಿ ಜಾಮೀನಿಗೆ ಅರ್ಜಿ ಸಲ್ಲಿಕೆ ಮಾಡಿದ್ದಾನೆ. ದರ್ಶನ್ & ಗ್ಯಾಂಗ್ ನಿಂದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತನಾಗಿರುವ ಪ್ರಕರಣದ 17 ನೇ ಆರೋಪಿ ನಿಖಿಲ್ ನಾಯಕ್ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾನೆ.
ರೇಣುಕಾಸ್ವಾಮಿ ಕೊಲೆ ನಡೆದ ಬಳಿಕ ಮೊದಲು ಪೊಲೀಸರ ಮುಂದೆ 17 ನೇ ಆರೋಪಿ ನಿಖಿಲ್ ನಾಯಕ್ ಶರಣಾಗಿದ್ದನು. 17 ಆರೋಪಿಗಳ ಪೈಕಿ ನಿಖಿಲ್ ನಾಯಕ್ ಪರ ವಕೀಲರು ಸಿಟಿ ಸಿವಿಲ್ ಕೋರ್ಟ್ 57 ನೇ ಸೆಷನ್ಸ್ ಕೋರ್ಟ್ ನಲ್ಲಿ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ. ಈತ ಕೊಲೆ ನಡೆದ ಬಳಿಕ ಪಟ್ಟಣಗೆರೆ ಶೆಡ್ ನಿಂದ ಮೃತದೇಹವನ್ನು ಸಾಗಿಸಿದ್ದನು ಎನ್ನಲಾಗಿದೆ.
ನಟ ದರ್ಶನ್ & ಗ್ಯಾಂಗ್ ನಿಂದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಈಗಾಗಲೇ 160ಕ್ಕೂ ಹೆಚ್ಚು ಸಾಕ್ಷಿಗಳನ್ನು ಕಲೆ ಹಾಕಿದ್ದಾರೆ. ಈ ನಡುವೆ ತನಿಖೆ ಇನ್ನಷ್ಟು ಚುರುಕುಗೊಳಿಸಿರುವ ಹಲವು ಸ್ಪೋಟಕ ಮಾಹಿತಿ ಕಲೆ ಹಾಕಿದ್ದಾರೆ. ಕೊಲೆ ಪ್ರಕರಣದಲ್ಲಿ ಡಿ ಗ್ಯಾಂಗ್ ಸದ್ಯ ಜೈಲು ಪಾಲಾಗಿದೆ.