HomeKarnataka2 ತಿಂಗಳಿನಿಂದ 'ಗೃಹಲಕ್ಷ್ಮಿ' ಹಣ ಬರ್ತಿಲ್ಲ ; ರಾಜ್ಯ ಸರ್ಕಾರದ ವಿರುದ್ಧ ಮಹಿಳೆಯರ ಆಕ್ರೋಶ |Gruha...

2 ತಿಂಗಳಿನಿಂದ ‘ಗೃಹಲಕ್ಷ್ಮಿ’ ಹಣ ಬರ್ತಿಲ್ಲ ; ರಾಜ್ಯ ಸರ್ಕಾರದ ವಿರುದ್ಧ ಮಹಿಳೆಯರ ಆಕ್ರೋಶ |Gruha Lakshmi Scheme

ಬೆಂಗಳೂರು : 2 ತಿಂಗಳಿನಿಂದ ಗೃಹಲಕ್ಷ್ಮಿ ಹಣ ಬರ್ತಿಲ್ಲ ಎಂದು ರಾಜ್ಯ ಸರ್ಕಾರದ ವಿರುದ್ಧ ಮಹಿಳೆಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮೈಸೂರಿನಲ್ಲಿ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ ಮಹಿಳೆಯರು ಗೃಹಲಕ್ಷ್ಮಿ ಹಣ ಬರುತ್ತೆ ಎಂಬ ನಿರೀಕ್ಷೆಯಲ್ಲಿದ್ದೆವು, : 2 ತಿಂಗಳಿನಿಂದ ಗೃಹಲಕ್ಷ್ಮಿ ಹಣ ಬರ್ತಿಲ್ಲ , ಹಣ ಬರದೇ ಸಾಕಷ್ಟು ತೊಂದರೆಯಾಗಿದೆ. ಶಕ್ತಿ ಯೋಜನೆಯಿಂದ ಮಹಿಳೆಯರಿಗೆ ಗೌರವ ಸಿಗುತ್ತಿಲ್ಲ. ಗ್ಯಾರಂಟಿ ಯೋಜನೆಯಿಂದ ದಿನನಿತ್ಯ ವಸ್ತುಗಳ ಎಲ್ಲಾ ಬೆಲೆ ಏರಿಕೆಯಾಗಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಮಹಿಳೆಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ‘ಗೃಹಲಕ್ಷ್ಮಿ’ ಯೋಜನೆಯಡಿ ಯಜಮಾನಿಯರಿಗೆ 2,000 ರೂ. ನೀಡಲಾಗುತ್ತಿದ್ದು, ಕೆಲವರಿಗೆ ಹಣ ಬಂದಿಲ್ಲ. ಕೆಲವರಿಗೆ ಹಣ ಬಂದಿಲ್ಲ. ಇದುವರೆಗೂ ದುಡ್ಡು ಬಾರದೇ ಇದ್ದ ಗೃಹಲಕ್ಷ್ಮಿ ಫಲಾನುಭವಿಗಳಿಗೆ ಹಂತ ಹಂತವಾಗಿ ಹಣ ಹಾಕುವ ಪ್ರಕ್ರಿಯೆ ನಡೆಯುತ್ತಿದೆ.ಆದರೆ ನಮಗೆ 2 ತಿಂಗಳಿನಿಂದ ಹಣ ಬರ್ತಿಲ್ಲ ಎಂದು ಮಹಿಳೆಯರು ಆರೋಪಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಈ ಕೆಲಸ ಮಾಡಿ

1) ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಮಹಿಳೆಯರು ತಪ್ಪದೇ ತಮ್ಮ ಖಾತೆಗೆ ಇಕೆವೈಸಿ ಮಾಡಿಸಬೇಕು. ಗೃಹಲಕ್ಷ್ಮಿ ಯೋಜನೆಯ ಹಣವನ್ನು ಪಡೆಯಬೇಕಾದ್ರೆ ರೇಷನ್ ಕಾರ್ಡ್ ನಲ್ಲಿ ಇರುವ ಪ್ರತಿಯೊಬ್ಬ ಸದಸ್ಯರೂ ಕೂಡ ಈಕೆವೈಸಿ ಮಾಡಿಸಬೇಕು.

2)ಗೃಹಲಕ್ಷ್ಮಿ ಯೋಜನೆಯಡಿ ಖಾತೆಗೆ ಹಣ ಬಾರದೇ ಇರುವವರು ಮುಖ್ಯವಾಗಿ ರೇಷನ್ ಕಾರ್ಡ್ ಜೊತೆಗೆ ಆಧಾರ್ ಕಾರ್ಡ್ ಲಿಂಕ್ ಮಾಡುವುದು ಕಡ್ಡಾಯವಾಗಿದೆ. ಒಂದು ವೇಳೆ ಇದನ್ನು ಮಾಡದಿದ್ದರೆ ಗೃಹಲಕ್ಷ್ಮಿಯರ ಖಾತೆಗೆ ಹಣ ಬರಲ್ಲ. ಹೀಗಾಗಿ ಕೂಡಲೇ ರೇಷನ್ ಕಾರ್ಡ್ ಗೆ ಆಧಾರ್ ಲಿಂಕ್ ಮಾಡಿಸಿಕೊಳ್ಳಿ.

3) ಗೃಹಲಕ್ಷ್ಮಿ ಯೋಜನೆಯಡಿ ನೋಂದಣಿ ಮಾಡಿಕೊಂಡು ಹಣ ಬಾರದ ಫಲಾನುಭವಿಗಳು ಕೂಡಲೇ ಅರ್ಜಿಯೊಂದಿಗೆ ಇ-ಕೆವೈಸಿ ಸಂಬಂಧಿತ ಸಮಸ್ಯೆಗಳನ್ನು ಬ್ಯಾಂಕ್ ಗಳಲ್ಲಿ ಪರಿಹರಿಸಿಕೊಳ್ಳಬೇಕು.

 

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular