ಬಳ್ಳಾರಿ: ವಾಲ್ಮೀಕಿ ನಿಗಮದಲ್ಲಿ ನಡೆದಿರುವ ಬಹುಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ಮೂರು ಬೇಡಿಕೆಗಳನ್ನು ಮುಂದಿಟ್ಟು ಮಾಜಿ ಸಚಿವ ಬಿ.ಶ್ರೀರಾಮುಲು ಅಹೋರಾತ್ರಿ ಧರಣಿ ನಡೆಸಿದ್ದಾರೆ.
ಬಳ್ಳಾರಿಯ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಶ್ರೀರಾಮುಲು ನೇತೃತ್ವದಲ್ಲಿ ಅಹೋರಾತ್ರಿ ಧರಣಿ ನಡೆದಿದ್ದು, ಶ್ರೀರಾಮುಲು ಡಿಸಿ ಕಚೇರಿ ಮುಂಭಾಗವೇ ರಾತ್ರಿಯಿಡಿ ಕಳೆದಿದ್ದಾರೆ. ಸರ್ಕಾರ ಹಾಗೂ ಮಾಜಿ ಸಚಿವ ನಾಗೇಂದ್ರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ವಾಲ್ಮೀಕಿ ನಿಗಮದಲ್ಲಿ ನಡೆದ 187 ಕೋಟಿ ಅಕ್ರಮ ಹಣವನ್ನು ಜಪ್ತಿ ಮಾಡಬೇಕು. ಮಾಜಿ ಸಚಿವ ಬಿ.ನಾಗೇಂದ್ರ ಅವರನ್ನು ಬಂಧಿಸಬೇಕು. ನಿಗಮದ ಹಗರಣದ ಬಗ್ಗೆ ಸಿಬಿಐ ತನಿಖೆ ನಡೆಸಬೇಕು ಎಂದು ಆಗ್ರಹಿಸಿದ್ದಾರೆ.