ಬೆಂಗಳೂರು : ಈಗಾಗಲೇ ಜೂನ್ ತಿಂಗಳ ‘ಗೃಹಲಕ್ಷ್ಮಿ’ ಹಣ ಹಾಕಿದ್ದೇವೆ, ಗೃಹಲಕ್ಷ್ಮಿ ಹಣವನ್ನು ಮೇ 1ರಂದು ಕೊಟ್ಟಿದ್ದೆವು. ಜೂನ್ ತಿಂಗಳ ಹಣ ಈಗಾಗಲೇ ಟ್ರೆಷರಿಗೆ ಹಾಕಿದ್ದೇವೆ . ಇಡೀ ರಾಜ್ಯದಲ್ಲಿ ಇವತ್ತು ಮತ್ತು ನಾಳೆ ನಾಳೆ ಕ್ರೆಡಿಟ್ ಆಗಲಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ಪಷ್ಟನೆ ನೀಡಿದ್ದಾರೆ.ಎಂದಿದ್ದಾರೆ.
2 ತಿಂಗಳಿನಿಂದ ‘ಗೃಹಲಕ್ಷ್ಮಿ’ ಹಣ ಬರ್ತಿಲ್ಲ ಎಂಬ ಮಹಿಳೆಯರು ಸರ್ಕಾರದ ವಿರುದ್ಧ ಕಿಡಿಕಾರಿದ್ದು, ಇದಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ಪಷ್ಟನೆ ನೀಡಿದ್ದಾರೆ.
ಯಾವುದೇ ಕಾರಣಕ್ಕೂ ಗೃಹಲಕ್ಷ್ಮಿ ಹಣ ನಿಲ್ಲಿಸೋಲ್ಲ, ಇನ್ನೆರಡು ದಿನಗಳಲ್ಲಿ ರಾಜ್ಯದ ಎಲ್ಲಾ ಮಹಿಳೆಯರ ಖಾತೆಗೆ ಹಣ ಜಮಾ ಆಗಲಿದೆ. ಬಿಜೆಪಿ ಸುಖಾ ಸುಮ್ಮನೆ ಅಪ್ರಪ್ರಚಾರ ಮಾಡುತ್ತಿದೆ, ಬಿಜೆಪಿಯವರಿಗೆ ಮಾಡೋಕೆ ಕೆಲಸ ಇಲ್ಲ ಎಂದರು.
ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ‘ಗೃಹಲಕ್ಷ್ಮಿ’ ಯೋಜನೆಯಡಿ ಯಜಮಾನಿಯರಿಗೆ 2,000 ರೂ. ನೀಡಲಾಗುತ್ತಿದ್ದು, ಕೆಲವರಿಗೆ ಹಣ ಬಂದಿಲ್ಲ. ಕೆಲವರಿಗೆ ಹಣ ಬಂದಿಲ್ಲ. ಇದುವರೆಗೂ ದುಡ್ಡು ಬಾರದೇ ಇದ್ದ ಗೃಹಲಕ್ಷ್ಮಿ ಫಲಾನುಭವಿಗಳಿಗೆ ಹಂತ ಹಂತವಾಗಿ ಹಣ ಹಾಕುವ ಪ್ರಕ್ರಿಯೆ ನಡೆಯುತ್ತಿದೆ.