HomeKarnatakaಯಜಮಾನಿಯರಿಗೆ ಗುಡ್ ನ್ಯೂಸ್ : ಇಂದು, ನಾಳೆ ಜೂನ್ ತಿಂಗಳ ‘ಗೃಹಲಕ್ಷ್ಮಿ’ ಹಣ ಜಮಾ...

ಯಜಮಾನಿಯರಿಗೆ ಗುಡ್ ನ್ಯೂಸ್ : ಇಂದು, ನಾಳೆ ಜೂನ್ ತಿಂಗಳ ‘ಗೃಹಲಕ್ಷ್ಮಿ’ ಹಣ ಜಮಾ |Gruha Lakshmi Scheme

ಬೆಂಗಳೂರು : ಯಜಮಾನಿಯರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಇಂದು,  ನಾಳೆ ಯಜಮಾನಿಯರ ಖಾತೆಗೆ ಜೂನ್ ತಿಂಗಳ ‘ಗೃಹಲಕ್ಷ್ಮಿ’ ಹಣ ಜಮಾ ಆಗಲಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.

ಈ ಕುರಿತು ಸುದ್ದಿಗಾರರ ಜೊತೆ ಮಾತನಾಡಿದ ಅವರು ಗೃಹಲಕ್ಷ್ಮಿ ಹಣವನ್ನು ಮೇ 1ರಂದು ಕೊಟ್ಟಿದ್ದೆವು. ಜೂನ್ ತಿಂಗಳ ಹಣ ಈಗಾಗಲೇ ಟ್ರೆಷರಿಗೆ ಹಾಕಿದ್ದೇವೆ, ಇಡೀ ರಾಜ್ಯದಲ್ಲಿ ಇಂದು ಮತ್ತು ನಾಳೆ ಖಾತೆಗೆ ಕ್ರೆಡಿಟ್ ಆಗಲಿದೆ ಎಂದಿದ್ದಾರೆ. ಯಾವುದೇ ಕಾರಣಕ್ಕೂ 5 ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸೋಲ್ಲ, ಬಿಜೆಪಿಯವರು ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಹೇಳಿದರು.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುವ ಮೊದಲೇ 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರುವ ಬಗ್ಗೆ ಘೋಷಿಸಿತ್ತು. ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಒಂದೊಂದಾಗಿ 5 ಯೋಜನೆಗಳನ್ನು ಜಾರಿಗೆ ತಂದಿದೆ. ಮನೆಯ ಯಜಮಾನಿಗೆ ಪ್ರತಿ ತಿಂಗಳು 2000 ರೂ. ನೀಡುವ ಗೃಹಲಕ್ಷ್ಮಿ ಯೋಜನೆ ಕೂಡ ಒಂದಾಗಿದೆ. ರಾಜ್ಯದ 1 ಕೋಟಿಗಿಂತ ಹೆಚ್ಚು ಮಹಿಳೆಯರು ಈಗಾಗಲೇ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಿ ಈ ಯೋಜನೆಯ ಸೌಲಭ್ಯ ಪಡೆದುಕೊಳ್ಳುತ್ತಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular