ಇಂದು ಟಿ 20 ವಿಶ್ವಕಪ್ ನ ಫೈನಲ್ ನಲ್ಲಿ ಭಾರತ ಹಾಗೂ ದಕ್ಷಿಣ ಆಫ್ರಿಕಾ ಮುಖಮುಖಿಯಾಗುತ್ತಿದ್ದು, ಕ್ರಿಕೆಟ್ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ. ಟಿ20 ವಿಶ್ವಕಪ್ ಪ್ರಾರಂಭವಾದ ವರ್ಷದಲ್ಲೇ ಭಾರತ ತಂಡ ಟ್ರೋಫಿ ತನ್ನದಾಗಿಸಿಕೊಂಡಿತ್ತು. 2007 ರಂದು ಎಂ ಎಸ್ ಧೋನಿ ನಾಯಕತ್ವದಲ್ಲಿ ಭಾರತ ತಂಡ ವಿಶ್ವ ಕಪ್ ಗೆಲ್ಲುವ ಮೂಲಕ ಹೊಸ ಇತಿಹಾಸ ಬರೆದಿತ್ತು. ಅದೇ ಟಿ20 ವಿಶ್ವಕಪ್ ನಲ್ಲಿ ಭಾರತದ ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್ ಆರು ಎಸೆತಗಳಲ್ಲಿ ಆರು ಸಿಕ್ಸರ್ ಬಾರಿಸುವ ಮೂಲಕ ನಿಬ್ಬೆರಗಾಗುವಂತೆ ಮಾಡಿದ್ದರು.
ಭಾರತ ತಂಡ ಟಿ20 ವಿಶ್ವಕಪ್ ಗೆದ್ದು ಇದೀಗ ಸುಮಾರು 17 ವರ್ಷಗಳಾಗಿದ್ದು, ಮತ್ತೊಮ್ಮೆ ಈ ಸಾಧನೆ ಮಾಡಲಿದೆಯಾ ಕಾದು ನೋಡಬೇಕಾಗಿದೆ. ಇಂದು ದೇಶದಲ್ಲೆಡೆ ಹಲವಾರು ಭಾರತೀಯ ಅಭಿಮಾನಿಗಳು ಟಿ20 ವಿಶ್ವಕಪ್ ಗೆಲ್ಲಲಿ ಎಂದು ದೇವರಿಗೆ ಪೂಜೆ ಸಲ್ಲಿಸಿದ್ದಾರೆ. ಮತ್ತೊಂದೆಡೆ ದಕ್ಷಿಣ ಆಫ್ರಿಕಾ ತಂಡ ಇದೇ ಮೊದಲ ಬಾರಿ t20 ವಿಶ್ವಕಪ್ ಫೈನಲ್ ಗೆ ಎಂಟ್ರಿ ಕೊಟ್ಟಿದ್ದು, ತನ್ನ ಮೊದಲ ಟಿ ಟ್ವೆಂಟಿ ವಿಶ್ವಕಪ್ ಗೆಲ್ಲುವ ನಿರೀಕ್ಷೆಯಲ್ಲಿದೆ.