HomeKarnatakaಬೆಂಗಳೂರು : ಕುಡಿದ ಮತ್ತಿನಲ್ಲಿ ಕಟ್ಟಡದಿಂದ ತಳ್ಳಿ ಸ್ನೇಹಿತನನ್ನು ಕೊಲೆ ಮಾಡಿದ ವ್ಯಕ್ತಿ..!

ಬೆಂಗಳೂರು : ಕುಡಿದ ಮತ್ತಿನಲ್ಲಿ ಕಟ್ಟಡದಿಂದ ತಳ್ಳಿ ಸ್ನೇಹಿತನನ್ನು ಕೊಲೆ ಮಾಡಿದ ವ್ಯಕ್ತಿ..!

ಬೆಂಗಳೂರು : ಕುಡಿದ ಮತ್ತಿನಲ್ಲಿ ವ್ಯಕ್ತಿಯೋರ್ವ ತನ್ನ ಸ್ನೇಹಿತನನ್ನು ಕಟ್ಟಡದಿಂದ ತಳ್ಳಿ ಕೊಲೆ ಮಾಡಿದ ಘಟನೆ ತಲಘಟ್ಟಪುರದ ಅಂಜನಾಪುರದಲ್ಲಿ ನಡೆದಿದೆ.

ಕೊಲೆಯಾದ ವ್ಯಕ್ತಿಯನ್ನು ವಿಶಾಲ್ ಯಾದವ್ ಎಂದು ಗುರುತಿಸಲಾಗಿದೆ. ಉತ್ತರ ಪ್ರದೇಶ ಮೂಲದ ಅಭಿಷೇಕ್ ಎಂಬಾತ ಈ ಕೃತ್ಯ ಎಸಗಿದ್ದಾನೆ.

ಇಬ್ಬರು ಸೇರಿಕೊಂಡು ನಿರ್ಮಾಣದ ಹಂತದ ಕಟ್ಟಡವೊಂದರಲ್ಲಿ ಎಣ್ಣೆ ಪಾರ್ಟಿ ಮಾಡಿದ್ದಾರೆ. ನಂತರ ಕುಡಿದ ಅಮಲಿನಲ್ಲಿ ಇಬ್ಬರು ಜಗಳ ಮಾಡಿಕೊಂಡಿದ್ದಾರೆ. ಮಾತಿಗೆ ಮಾತು ಬೆಳೆದು ವಿಶಾಲ್ ಯಾದವ್ ನನ್ನು ಅಭಿಷೇಕ್ ಕಟ್ಟಡದಿಂದ ಕೆಳಗೆ ತಳ್ಳಿದ್ದಾನೆ ಎನ್ನಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡ ವಿಶಾಲ್ ಮೃತಪಟ್ಟಿದ್ದಾರೆ. ತಲಘಟ್ಟ ಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿದ ಪರಿಶೀಲನೆ ನಡೆಸಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular