ಭಾರೀ ಮಳೆಗೆ ನಿನ್ನೆ ದೆಹಲಿ ಏರ್ ಪೋರ್ಟ್ ನ ಮೇಲ್ಛಾವಣಿ ಕುಸಿದು ಓರ್ವ ಸಾವನ್ನಪ್ಪಿ, ಐವರು ಗಾಯಗೊಂಡಿದ್ದರು. ಈ ಬೆನ್ನಲ್ಲೇ ಇದೀಗ ರಾಜ್ ಕೋಟ್ ಏರ್ ಪೋರ್ಟ್ ನ ಮೇಲ್ಛಾವಣಿ ಕೂಡ ಕುಸಿದಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಭಾರೀ ಮಳೆಗೆ ರಾಜ್ಕೋಟ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಹೊರಗಿನ ಪ್ರಯಾಣಿಕರ ಪಿಕಪ್ ಮತ್ತು ಡ್ರಾಪ್ ಪ್ರದೇಶದ ಛಾವಣಿ ಶನಿವಾರ ಕುಸಿದಿದೆ. ಘಟನೆಯಲ್ಲಿ ಈವರೆಗೆ ಯಾರೂ ಗಾಯಗೊಂಡಿರುವ ಬಗ್ಗೆ ವರದಿಯಾಗಿಲ್ಲ.
ದೆಹಲಿಯ ಇಂದಿರಾ ಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 1 ರಲ್ಲಿ ಛಾವಣಿ ಕುಸಿದ ಹಿನ್ನೆಲೆಯಲ್ಲಿ ಕ್ಯಾಬ್ ಚಾಲಕ ದುರಂತವಾಗಿ ಸಾವನ್ನಪ್ಪಿದ್ದು, ಅನೇಕರು ಗಾಯಗೊಂಡಿದ್ದರು.
VIDEO | Canopy collapses at the passenger pickup and drop area outside #Rajkot airport terminal amid heavy rains.
(Source: Third Party) pic.twitter.com/gsurfX2O1S
— Press Trust of India (@PTI_News) June 29, 2024

