BREAKING: ಖಾಸಗಿ ನರ್ಸಿಂಗ್ ಕಾಲೇಜಿನ 5 ಬಸ್ ಗಳು ಬೆಂಕಿಗಾಹುತಿ

ಬೆಂಗಳೂರು: ಖಾಸಗಿ ನರ್ಸಿಂಗ್ ಕಾಲೇಜಿನ ಬಸ್ ಗಳು ಬೆಂಕಿಗಾಹುತಿಯಾಗಿರುವ ಘಟನೆ ಬೆಂಗಳೂರಿನ ಹೆಗ್ಗನಹಳ್ಳಿ ಕ್ರಾಸ್ ಬಳಿ ನಡೆದಿದೆ.

ಹೆಗ್ಗನಳ್ಳಿ ಕ್ರಾಸ್ ಬಳಿ ಖಾಲಿ ಜಾಗದಲ್ಲಿ ಖಾಸಗಿ ನರ್ಸಿಂಗ್ ಕಾಲೇಜಿನ 7 ಬಸ್ ಗಳನ್ನು ನಿಲ್ಲಿಸಲಾಗಿತ್ತು. ಸ್ಥಳದಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, 5 ಬಸ್ ಗಳು ಧಗ ಧಗನೆ ಹೊತ್ತಿ ಉರಿದಿವೆ.

ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿಗಳು ಆಗಮಿಸಿ ಬೆಂಕಿ ನಂದಿಸಿದ್ದಾರೆ. ಅದೃಷ್ಟವಶಾತ್ ಯಾವುದೇ ಸಾವು-ನೋವು ಸಂಭವಿಸಿಲ್ಲ. ಅಗ್ನಿಅವಘಡಕ್ಕೆ ಕಾರಣ ತಿಳಿದುಬಂದಿಲ್ಲ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read