ನವದೆಹಲಿ: ದಕ್ಷಿಣ ಆಫ್ರಿಕಾ ವಿರುದ್ಧ T20 ವಿಶ್ವಕಪ್ ಫೈನಲ್ ಪಂದ್ಯವನ್ನು ಗೆದ್ದ ಭಾರತ ತಂಡಕ್ಕೆ ಅಭಿನಂದನೆಗಳ ಮಹಾಪೂರವೇ ಹರಿದು ಬಂದಿದೆ.
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಟಿ20 ವಿಶ್ವಕಪ್ ಗೆದ್ದ ಟೀಂ ಇಂಡಿಯಾಗೆ ಅಭಿನಂದನೆ ಸಲ್ಲಿಸಿದ್ದಾರೆ. ಟಿ20 ವಿಶ್ವಕಪ್ ಗೆದ್ದ ಟೀಂ ಇಂಡಿಯಾಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳು. ತಂಡವು ಕಷ್ಟಕರ ಸಂದರ್ಭಗಳಲ್ಲಿ ಉತ್ಸಾಹದೊಂದಿಗೆ ಸಾಗಿತು ಮತ್ತು ಪಂದ್ಯಾವಳಿಯ ಉದ್ದಕ್ಕೂ ಅತ್ಯುತ್ತಮ ಕೌಶಲ್ಯಗಳನ್ನು ಪ್ರದರ್ಶಿಸಿತು. ಇದು ಅಂತಿಮ ಪಂದ್ಯದಲ್ಲಿ ಅಸಾಮಾನ್ಯ ಗೆಲುವು. ನಾವು ನಿಮ್ಮ ಬಗ್ಗೆ ಹೆಮ್ಮೆಪಡುತ್ತೇವೆ! ಎಂದು ರಾಷ್ಟ್ರಪತಿ ತಿಳಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ಟಿ20 ವಿಶ್ವಕಪ್ ಗೆದ್ದ ಭಾರತ ತಂಡವನ್ನು ಅಭಿನಂದಿಸಿದ್ದಾರೆ. “ನಮ್ಮ ತಂಡವು T20 ವಿಶ್ವಕಪ್ ಅನ್ನು ತನ್ನದೇ ಶೈಲಿಯಲ್ಲಿ ಮನೆಗೆ ತಂದಿದೆ! ನಾವು ಭಾರತೀಯ ಕ್ರಿಕೆಟ್ ತಂಡದ ಬಗ್ಗೆ ಹೆಮ್ಮೆಪಡುತ್ತೇವೆ. ಈ ಪಂದ್ಯವು ಐತಿಹಾಸಿಕವಾಗಿತ್ತು,” ಎಂದು ತಿಳಿಸಿದ್ದಾರೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ ಕೂಡ ಟೀಂ ಇಂಡಿಯಾ ಗೆಲುವಿಗೆ ಅಭಿನಂದನೆ ಸಲ್ಲಿಸಿದ್ದಾರೆ.
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ಧರಾಮಯ್ಯ, ಪ್ರಿಯಾಂಕಾ ಗಾಂಧಿ ಸೇರಿ ದೇಶದ ಗಣ್ಯರು ಟೀಂ ಇಂಡಿಯಾ ಗೆಲುವಿಗೆ ಶುಭ ಹಾರೈಸಿದ್ದಾರೆ.
2007 ರಲ್ಲಿ ದಕ್ಷಿಣ ಆಫ್ರಿಕಾದಲ್ಲಿ ಎಂಎಸ್ ಧೋನಿ ನಾಯಕತ್ವದಲ್ಲಿ ಗೆದ್ದ ನಂತರ ಭಾರತಕ್ಕೆ ಇದು ಎರಡನೇ ಟಿ 20 ವಿಶ್ವಕಪ್ ಗೆಲುವು.
My heartiest congratulations to Team India for winning the T20 World Cup. With the never-say-die spirit, the team sailed through difficult situations and demonstrated outstanding skills throughout the tournament. It was an extraordinary victory in the final match. Well done, Team…
— President of India (@rashtrapatibhvn) June 29, 2024
CHAMPIONS!
Our team brings the T20 World Cup home in STYLE!
We are proud of the Indian Cricket Team.
This match was HISTORIC. 🇮🇳 🏏 🏆 pic.twitter.com/HhaKGwwEDt
— Narendra Modi (@narendramodi) June 29, 2024
Congratulations to Team India on a spectacular World Cup Victory and a phenomenal performance throughout the tournament!
Surya, what a brilliant catch! Rohit, this win is a testament to your leadership. Rahul, I know team India will miss your guidance.
The spectacular Men in… pic.twitter.com/lkYlu33egb
— Rahul Gandhi (@RahulGandhi) June 29, 2024
ವಿಶ್ವಕಪ್ ವಿಜೇತ ಭಾರತ ತಂಡಕ್ಕೆ ಅಭಿನಂದನೆಗಳು.
ನಿರ್ಣಾಯಕ ಹಂತದಲ್ಲಿ ನಮ್ಮವರು ತೋರಿದ ಸಂಘಟಿತ ಪ್ರದರ್ಶನ ಪಂದ್ಯದ ದಿಕ್ಕನ್ನೇ ಬದಲಿಸಿತು. ಇಡೀ ಪಂದ್ಯಾವಳಿಯಲ್ಲಿ ಒಂದು ಪಂದ್ಯವನ್ನೂ ಸೋಲದೆ ಅಜೇಯರಾಗುಳಿದು ವಿಶ್ವಕಪ್ ಟಿ20 ಜಯಿಸಿದ ಭಾರತ ತಂಡದ ಸಾಧನೆ ನಿಜಕ್ಕೂ ಶ್ಲಾಘನೀಯ.ಒಂದು ಹಂತದಲ್ಲಿ ಗೆಲುವಿನ ಸನಿಹಕ್ಕೆ ಬಂದು ಕಡೇ ಕ್ಷಣದಲ್ಲಿ… pic.twitter.com/cjPR2VrLAj
— Siddaramaiah (@siddaramaiah) June 29, 2024

