HomeIndiaಭಾರತೀಯ ಸೇನಾ ಮುಖ್ಯಸ್ಥರಾಗಿ ಜನರಲ್ ಉಪೇಂದ್ರ ದ್ವಿವೇದಿ ಅಧಿಕಾರ ಸ್ವೀಕಾರ

ಭಾರತೀಯ ಸೇನಾ ಮುಖ್ಯಸ್ಥರಾಗಿ ಜನರಲ್ ಉಪೇಂದ್ರ ದ್ವಿವೇದಿ ಅಧಿಕಾರ ಸ್ವೀಕಾರ

ನವದೆಹಲಿ: ಜನರಲ್ ಉಪೇಂದ್ರ ದ್ವಿವೇದಿ ಇಂದು ಭಾರತೀಯ ಸೇನೆಯ ಹೊಸ ಮುಖ್ಯಸ್ಥರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ.

ಜನರಲ್ ಮನೋಜ್ ಪಾಂಡೆ ಅವರ ಉತ್ತರಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. ಸೇನಾ ಮುಖ್ಯಸ್ಥರ ಪಾತ್ರವನ್ನು ವಹಿಸುವ ಮೊದಲು, ಲೆಫ್ಟಿನೆಂಟ್ ಜನರಲ್ ದ್ವಿವೇದಿ ಅವರು ಫೆಬ್ರವರಿ 24 ರಿಂದ ಸೇನಾ ಸಿಬ್ಬಂದಿಯ ಉಪ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದರು.

ಜುಲೈ 1, 1964 ರಂದು ಜನಿಸಿದ ಜನರಲ್ ಉಪೇಂದ್ರ ದ್ವಿವೇದಿ ಅವರು ಡಿಸೆಂಬರ್ 15, 1984 ರಂದು ಭಾರತೀಯ ಸೇನೆಯ ಪದಾತಿ ದಳಕ್ಕೆ(ಜಮ್ಮು ಮತ್ತು ಕಾಶ್ಮೀರ ರೈಫಲ್ಸ್) ನೇಮಕಗೊಂಡರು. ಸುಮಾರು 40 ವರ್ಷಗಳ ಸುದೀರ್ಘ ಕಾಲ ವಿವಿಧ ಕಮಾಂಡ್‌ಗಳಲ್ಲಿ ವಿಶಿಷ್ಟ ಸೇವೆ ಸಲ್ಲಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular