HomeKarnatakaBIG NEWS: ಇಂದಿನಿಂದ ಪೊಲೀಸ್ ಠಾಣೆಗಳಲ್ಲಿ ಹೊಸ ಸೆಕ್ಷನ್ ಗಳಡಿ ಕೇಸ್ ದಾಖಲು

BIG NEWS: ಇಂದಿನಿಂದ ಪೊಲೀಸ್ ಠಾಣೆಗಳಲ್ಲಿ ಹೊಸ ಸೆಕ್ಷನ್ ಗಳಡಿ ಕೇಸ್ ದಾಖಲು

ಬೆಂಗಳೂರು: ರಾಜ್ಯದ ಪೊಲೀಸ್ ಠಾಣೆಗಳಲ್ಲಿ ಇಂದಿನಿಂದ ಹೊಸ ಸೆಕ್ಷನ್ ಗಳಡಿ ಕೇಸ್ ದಾಖಲಿಸಲಾಗುತ್ತದೆ. ದೇಶಾದ್ಯಂತ ಇಂದಿನಿಂದ ಹೊಸ ಕಾನೂನು ಜಾರಿಗೆ ಬರಲಿದೆ. ಭಾರತೀಯ ನ್ಯಾಯ ಸಂಹಿತೆ, ನಾಗರಿಕ ಸುರಕ್ಷಾ ಸಂಹಿತೆ, ಭಾರತೀಯ ಸಾಕ್ಷ್ಯ ಕಾಯ್ದೆಗಳ ಕಲಂಗಳ ಅಡಿಯಲ್ಲಿ ಎಫ್ಐಆರ್ ದಾಖಲಿಸಲಾಗುತ್ತದೆ.

ದೇಶಾದ್ಯಂತ ಹೊಸ ಕಾಯ್ದೆ ಜಾರಿಯಾಗುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿಯೂ ಅವುಗಳ ಅನುಷ್ಠಾನವಾಗಲಿದೆ. ಈಗಾಗಲೇ ರಾಜ್ಯದ ಪೊಲೀಸರು, ಅಧಿಕಾರಿಗಳಿಗೆ ಹೊಸ ಕಾಯ್ದೆ ಮತ್ತು ಕಲಂಗಳ ಬಗ್ಗೆ ತರಬೇತಿ ನೀಡಲಾಗಿದೆ. ಹೊಸ ಕಾಯ್ದೆಗಳ ಬಗ್ಗೆ ರಾಜ್ಯ ಪೊಲೀಸ್ ಇಲಾಖೆಯ ವೆಬ್ಸೈಟ್‌ನಲ್ಲಿಯೂ ಮಾಹಿತಿ ನೀಡಲಾಗುತ್ತಿದೆ.

ಇಂದಿನಿಂದ ರಾಜ್ಯದ ಪೋಲಿಸ್ ಠಾಣೆಗಳಿಗೆ ಬರುವ ದೂರುಗಳ ಸಂಬಂಧ ಪೊಲೀಸರು ಹೊಸ ಕಾಯ್ದೆಗಳ ಕಲಂಗಳ ಅಡಿಯಲ್ಲಿ ಎಫ್ಐಆರ್ ದಾಖಲಿಸಲಾಗುತ್ತಾರೆ. ಬಳಿಕ ತನಿಖೆ ನಡೆಸಿ ನ್ಯಾಯಾಲಯಗಳಿಗೆ ದೋಷಾರೋಪ ಪಟ್ಟಿ ಸಲ್ಲಿಸಲಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular