HomeAgricultureರೈತರಿಗೆ ಗುಡ್ ನ್ಯೂಸ್: ಮರು ವಿನ್ಯಾಸಗೊಳಿಸಿದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆ ಜಾರಿ

ರೈತರಿಗೆ ಗುಡ್ ನ್ಯೂಸ್: ಮರು ವಿನ್ಯಾಸಗೊಳಿಸಿದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆ ಜಾರಿ

2024-25ನೇ ಸಾಲಿನಲ್ಲಿ ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಯನ್ನು ಚಿತ್ರದುರ್ಗ ಜಿಲ್ಲೆಯಲ್ಲಿ ಬಹುವಾರ್ಷಿಕ ತೋಟಗಾರಿಕೆ ಬೆಳೆಗಳಾದ ಅಡಿಕೆ, ದಾಳಿಂಬೆ ಮತ್ತು ಮಾವು ಬೆಳೆಗಳಿಗೆ ಮರು ವಿನ್ಯಾಸಗೊಳಿಸಿ ಅನುಷ್ಟಾನಗೊಳಿಸಲಾಗಿದೆ. ಬೆಳೆ ವಿಮೆ ನೊಂದಣಿಗೆ ಜುಲೈ 31 ಕೊನೆಯ ದಿನವಾಗಿದೆ.

ಹವಾಮಾನ ಅಂಶಗಳಾದ ತಾಪಮಾನ, ಗಾಳಿಯ ವೇಗ, ಮಳೆಯ ಪ್ರಮಾಣ, ಆದ್ರ್ರತೆ ಇತ್ಯಾದಿ ಮಾಹಿತಿಗಳನ್ನು ಸ್ಥಳೀಯವಾಗಿ ಲಭ್ಯವಿರುವ ಟೆಲಿಮೆಟ್ರಿಕ್ ಮಳೆ ಮಾಪನ ಕೇಂದ್ರಗಳಲ್ಲಿ ದಾಖಲಿಸುವ ಅಂಶಗಳ ಆಧಾರದ ಮೇಲೆ ಬೆಳೆ ವಿಮಾ ನಷ್ಠವನ್ನು ತೀರ್ಮಾನಿಸಲಾಗುವುದು.

2024ರ ಮುಂಗಾರು ಹಂಗಾಮಿಗೆ ಮರು ವಿನ್ಯಾಸಗೊಳಿಸಿದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯಡಿ ಬೆಳೆವಾರು, ವಿಮಾ ಮೊತ್ತ ಹಾಗೂ ವಿಮಾ ಕಂತಿನ ವಿವರ ಇಂತಿದೆ.  ಮಾವು ಬೆಳೆಗೆ ಪ್ರತಿ ಹೆಕ್ಟೇರ್‍ಗೆ 80000 ರೂ., ವಿಮಾ ಮೊತ್ತ ನೀಡಲಾಗುವುದು. ರೈತರು 5 ಕಂತುಗಳಲ್ಲಿ ಪಾವತಿಸಬೇಕಾದ ವಿಮಾ ಮೊತ್ತ 4000 ರೂ., ದಾಳಿಂಬೆ ಬೆಳೆಗೆ ಪ್ರತಿ ಹೆಕ್ಟೇರ್ ಗೆ 127000 ರೂ. ನೀಡಲಾಗುವುದು, ರೈತರು 5 ಕಂತುಗಳಲ್ಲಿ ಪಾವತಿಸಬೇಕಾದ ವಿಮಾ ಮೊತ್ತ 6350 ರೂ. ಹಾಗೂ ಅಡಿಕೆ ಬೆಳೆಗೆ ಪ್ರತಿ ಹೆಕ್ಟೇರ್ ಗೆ 128000 ರೂ. ನೀಡಲಿದ್ದು, ರೈತರು 5 ಕಂತುಗಳಲ್ಲಿ 6400 ರೂ. ಬೆಳೆಗಳ ವಿಮೆಯನ್ನು ಬ್ಯಾಂಕ್‍ಗಳಲ್ಲಿ, ಸಾಮಾನ್ಯ ಸೇವಾ ಕೇಂದ್ರ ಆರ್ಥಿಕ ಸಂಸ್ಥೆಗಳಲ್ಲಿ ನೋಂದಣಿ ಮಾಡಬಹುದು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹೆಚ್ಚಿನ ಮಾಹಿತಿಗಾಗಿ ಸಮೀಪದ ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಹಾಗೂ ರೈತ ಸಂಪರ್ಕ ಕೇಂದ್ರದ ಸಹಾಯಕ ತೋಟಗಾರಿಕೆ ಅಧಿಕಾರಿಗಳನ್ನು ಅಥವಾ ಹತ್ತಿರದ ಬ್ಯಾಂಕ್ ಅಧಿಕಾರಿಗಳನ್ನು ಸಂಪರ್ಕಿಸಬಹುದು ಎಂದು ಚಿತ್ರದುರ್ಗ ತೋಟಗಾರಿಕೆ ಉಪನಿರ್ದೇಶಕರು ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular