ಮಹಾರಾಷ್ಟ್ರದ ಗಡಿಯಲ್ಲಿನ ಸರ್ಕಾರಿ ಕನ್ನಡ ಶಾಲೆಗಳಿಗೆ ಮರಾಠಿ ಶಿಕ್ಷಕರ ನೇಮಕ ಮಾಡಿರುವುದನ್ನು ಖಂಡಿಸಿ ಗಡಿ ಕನ್ನಡಿಗರು, ಕನ್ನಡಪರ ಸಂಘಟನೆಗಳು ಪ್ರತಿಭಟನೆ ನಡೆಸಿವೆ.
ಸರ್ಕಾರಿ ಕನ್ನಡ ಶಾಲೆಗಳಿಗೆ ಮರಾಠಿ ಶಿಕ್ಷಕರನ್ನು ನೇಮಕ ಮಾಡಲಾಗಿದೆ. ಮರಾಠಿ ಶಿಕ್ಷಕರ ಬದಲಾಗಿ ಕನ್ನಡಿಗರನ್ನು ನೇಮಕ ಮಾಡುವಂತೆ ಆಗ್ರಹಿಸಿ ಗಡಿ ಕನ್ನಡಿಗರ ಸಂಘ ಸಂಖ ತಹಶಿಲ್ದಾರ್ ಕಚೇರಿ ಎದುರು ಪ್ರತಿಭಟನೆ ನಡೆಸಿದೆ.
ಮಹಾರಾಷ್ಟ್ರದ ಜತ್ತ ತಾಲೂಕಿನ ಗಡಿನಾಡು ಕನ್ನಡ ಸಂಘದ ಕಾರ್ಯಕರ್ತರು ಪ್ರತಿಭಟನೆ ತೀವ್ರಗೊಳಿಸಿದ್ದಾರೆ. ಕನ್ನಡ ಶಿಕ್ಷಕರನ್ನು ನೇಮಕ ಮಾಡುವಂತೆ ಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ.