ಇದೆಂಥಹ ದುರಂತ! ಬ್ಯಾಡ್ಮಿಂಟನ್ ಆಟಗಾರನೊಬ್ಬ ಪಂದ್ಯದ ವೇಳೆಯೇ ಹೃದಯ ಸ್ತಂಭನದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ.
ಚೀನಾದ ಬ್ಯಾಡ್ಮಿಂಟನ್ ಆಟಗಾರನ ಸಾವಿನ ಆಘಾತಕಾರಿ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಆಟಗಾರನ ಕೊನೇ ಕ್ಷಣಗಳು ಆತಂಕವನ್ನುಂಟುಮಾಡುವಂತಿದೆ. ಇತ್ತೀಚಿನ ದಿನಗಳಲ್ಲಿ ಜಿಮ್ ಮಾಡುತ್ತಿದ್ದಾಗಲೇ ಹಲವರು ಹೃದಯಾಘಾತಕ್ಕೊಳಗಾಗಿ ಸಾವನ್ನಪ್ಪುತ್ತಿರುವುದನ್ನು, ಶಾಲಾ ಮೈದಾನದಲ್ಲಿ ಆಟವಾಡುತ್ತಿದ್ದಾಗಲೇ ಕುಸಿದು ಬಿದ್ದು ಮಕ್ಕಳು ಸಾವನ್ನಪ್ಪಿದ ಘಟನೆಗಳನ್ನು ನೋಡಿದ್ದೇವೆ. ಇದೀಗ ಬ್ಯಾಡ್ಮಿಂಟನ್ ಆಟಗಾರನೊಬ್ಬ ಮೈದಾನದಲ್ಲಿ ಪಂದ್ಯದ ವೇಳೆಯೇ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ನಡೆದಿದೆ.
17 ವರ್ಷದ ಚೀನಾದ ಬ್ಯಾಡ್ಮಿಂಟನ್ ಆಟಗಾರ ಝಾಂಗ್ ಝಿಜಿ ಹೃದಯಾಘಾತದಿಂದ ಮೈದಾನದಲ್ಲಿ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ಈ ಆಘಾತಕಾರಿ ಘಟನೆ ಬ್ಯಾಡ್ಮಿಂಟನ್ ಅಂಗಳದಲ್ಲಿಯೇ ನಡೆದಿದೆ. ಇಂಡೋನೇಷ್ಯಾದಲ್ಲಿ ನಡೆದ ಪಂದ್ಯಾವಳಿಯ ವೇಳೆ ಬ್ಯಾಡ್ಮಿಂಟನ್ ಆಟಗಾರ ಜಾಂಗ್ ಝಿಜಿ ಅಂಗಳದಲ್ಲಿಯೇ ಕುಸಿದುಬಿದ್ದು ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
https://twitter.com/snehamordani/status/1808042437660610763?ref_src=twsrc%5Etfw%7Ctwcamp%5Etweetembed%7Ctwterm%5E1808042437660610763%7Ctwgr%5E51297841ab98eb15c1c63f1d9527558d685d8f4e%7Ctwcon%5Es1_c10&ref_url=https%3A%2F%2Fwww.freepressjournal.in%2Fsports%2Ftragic-chinese-badminton-player-dies-after-collapsing-amid-a-match-visuals-surface