ಮಂಡ್ಯ: ಮಂಡ್ಯ ಲೋಕಸಭಾ ಕ್ಷೇತ್ರದ ಸಂಸದರಾದ ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವ ಹೆಚ್.ಡಿ. ಕುಮಾರಸ್ವಾಮಿ ಜುಲೈ 5ರಂದು ಬೆಳಗ್ಗೆ 10 ಗಂಟೆಗೆ ಮಂಡ್ಯ ನಗರದ ಅಂಬೇಡ್ಕರ್ ಭವನದಲ್ಲಿ ಜನತಾದರ್ಶನ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.
ಕೇಂದ್ರ ಸಚಿವರಾದ ನಂತರ ಮೊದಲ ಬಾರಿಗೆ ಅವರು ಜನತಾದರ್ಶನ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಇದಕ್ಕಾಗಿ ಅಗತ್ಯ ಕ್ರಮ, ಸಿದ್ಧತೆ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಡಾ. ಕುಮಾರ್ ಅವರಿಗೆ ಪತ್ರದ ಮೂಲಕ ಸೂಚಿಸಿದ್ದಾರೆ.
ಕುಮಾರಸ್ವಾಮಿ ಅವರು ಜನತಾದರ್ಶನ ನಡೆಸುವ ಮೂಲಕ ಜಿಲ್ಲೆಯ ಜನರ ಸಮಸ್ಯೆ ಆಲಿಸಿ ಅವುಗಳು ಸ್ಥಳದಲ್ಲಿಯೇ ಬಗೆಹರಿಯುವಂತಿದ್ದರೆ ಅಧಿಕಾರಿಗಳ ಮೂಲಕ ಪರಿಹಾರ ಸೂಚಿಸುವರು.