HomeKarnatakaBIG NEWS: 1 ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಮತ್ತೆ ಮೌಲ್ಯಾಂಕನ ಪರೀಕ್ಷೆ

BIG NEWS: 1 ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಮತ್ತೆ ಮೌಲ್ಯಾಂಕನ ಪರೀಕ್ಷೆ

ಬೆಂಗಳೂರು: 5, 8 ಮತ್ತು 9ನೇ ತರಗತಿಗಳ ಬೋರ್ಡ್ ಪರೀಕ್ಷೆಗಳನ್ನು ನ್ಯಾಯಾಲಯ ರದ್ದು ಮಾಡಿದ ಹಿನ್ನೆಲೆಯಲ್ಲಿ ಶಾಲೆಗಳಲ್ಲಿ ಈ ಹಿಂದೆ ಇದ್ದಂತೆ ಎಲ್ಲಾ ತರಗತಿಗಳಿಗೂ ಮೌಲ್ಯಾಂಕನ ಪರೀಕ್ಷೆ ಮುಂದುವರೆಸಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸುತ್ತೋಲೆ ಹೊರಡಿಸಿದೆ.

ರಾಜ್ಯ ಪಠ್ಯಕ್ರಮ ಅನುಸರಿಸುವ ರಾಜ್ಯ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆಗಳು 2024 -25 ನೇ ಶೈಕ್ಷಣಿಕ ವರ್ಷದಿಂದ ಒಂದರಿಂದ ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ಭಾಗ -1 ಮತ್ತು ಮತ್ತು ಭಾಗ -2ರ ಆಧಾರದಲ್ಲಿ ಮೌಲ್ಯಂಕನ ಪೂರ್ಣಗೊಳಿಸಬೇಕು ಎಂದು ಹೇಳಲಾಗಿದೆ.

ಶಾಲಾ ಮಕ್ಕಳ ಬ್ಯಾಗ್ ಹೊರೆ ಕಡಿಮೆ ಮಾಡಲು ಮೊದಲಾರ್ಧ ಶೇಕಡ 50ರಷ್ಟು ಪಠ್ಯ ಮತ್ತು ನಂತರದ ಅರ್ಧ ಶೇಕಡ 50ರಷ್ಟು ಪಠ್ಯದ ನಿಯಮವನ್ನು ಅನುಸರಿಸಬೇಕೆಂದು ಶಿಕ್ಷಣ ಇಲಾಖೆ ಸೂಚನೆ ನೀಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular