alex Certify BIG NEWS: ಯಾವ ಸಮಾಜಕ್ಕೂ ಅನ್ಯಾಯವಾಗದಂತೆ ಜಾತಿ ಗಣತಿ ವರದಿ ಅನುಷ್ಠಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಯಾವ ಸಮಾಜಕ್ಕೂ ಅನ್ಯಾಯವಾಗದಂತೆ ಜಾತಿ ಗಣತಿ ವರದಿ ಅನುಷ್ಠಾನ

ಬೆಂಗಳೂರು: ವಿಸ್ತೃತ ಚರ್ಚೆಯ ಬಳಿಕ ಜಾತಿ ಗಣತಿ ವರದಿ ಅನುಷ್ಠಾನಗೊಳಿಸಲಾಗುವುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಶಿವರಾಜ್ ತಂಗಡಗಿ ಹೇಳಿದ್ದಾರೆ.

ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಸ್ತೃತ ಚರ್ಚೆಯ ಬಳಿಕ ಯಾವ ಸಮಾಜಕ್ಕೂ ಅನ್ಯಾಯವಾಗದಂತೆ ಜಾತಿ ಗಣತಿ ವರದಿ ಅನುಷ್ಠಾನಗೊಳಿಸಲು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಚಿಂತನೆ ನಡೆಸಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಾತಿ ಗಣತಿ ವರದಿಯನ್ನು ಈಗಾಗಲೇ ಸ್ವೀಕರಿಸಿದ್ದು, ಪೂರ್ಣ ಪ್ರಮಾಣದ ಚರ್ಚೆಯ ಬಳಿಕ ಸದನದಲ್ಲಿ ವರದಿ ಮಂಡಿಸುವ ಬಗ್ಗೆ ನಿರ್ಧಾರ ಕೈಗೊಳ್ಳುತ್ತಾರೆ. ಯಾವ ಸಮಾಜಕ್ಕೂ ಅನ್ಯಾಯವಾಗದಂತೆ ವರದಿ ಅನುಷ್ಠಾನಗೊಳಿಸಲಾಗುವುದು ಎಂದು ಹೇಳಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...