HomeKarnatakaBREAKING: ಕಟ್ಟಡ ನಿರ್ಮಾಣ ವೇಳೆ ಏಕಾಏಕಿ ಮಣ್ಣು ಕುಸಿತ: ಅವಶೇಷಗಳಡಿ ಸಿಲುಕಿದ ಇಬ್ಬರು ಕಾರ್ಮಿಕರು

BREAKING: ಕಟ್ಟಡ ನಿರ್ಮಾಣ ವೇಳೆ ಏಕಾಏಕಿ ಮಣ್ಣು ಕುಸಿತ: ಅವಶೇಷಗಳಡಿ ಸಿಲುಕಿದ ಇಬ್ಬರು ಕಾರ್ಮಿಕರು

ಮಂಗಳೂರು: ಕಟ್ಟಡ ನಿರ್ಮಾಣ ಕಾಮಗಾರಿ ವೇಳೆ ಏಕಾಏಕಿ ಮಣ್ಣು ಕುಸಿದು, ಇಬ್ಬರು ಕಾರ್ಮಿಕರು ಅವಶೇಷಗಳಡಿ ಸಿಲುಕಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಬಲ್ಮಠದಲ್ಲಿ ನಡೆದಿದೆ.

ಖಾಸಗಿ ಕಟ್ಟದ ನಿರ್ಮಾಣ ಕಾಮಗಾರಿ ವೇಳೆ ಈ ದುರಂತ ಸಂಭವಿಸಿದೆ. ಮಣ್ಣಿನಡಿ ಇಬ್ಬರು ಕೂಲಿ ಕಾರ್ಮಿಕರು ಸಿಲುಕಿಕೊಂಡಿದ್ದು, ಕಾರ್ಮಿಕರ ರಕ್ಷಣೆಗಾಗಿ ಕಾರ್ಯಾಚರಣೆ ನಡೆದಿದೆ.

ಸ್ಥಳಕ್ಕೆ ಎಸ್ ಡಿ ಆರ್ ಎಫ್, ಅಗ್ನಿಶಾಮಕ ಸಿಬ್ಬಂದಿಗಳು ದೌಡಾಯಿಸಿದ್ದು, ಮಣ್ಣು ತೆರವುಗೊಳಿಸಿ, ಕಾರ್ಮಿಕರನ್ನು ರಕ್ಷಿಸುವ ನಿಟ್ಟಿನಲ್ಲಿ ಕಾರ್ಯಾಚರಣೆ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular