HomeKarnatakaBREAKING NEWS: ಬಸ್-ಕಾರು ಭೀಕರ ಅಪಘಾತ: ಪಲ್ಟಿಯಾದ ಬಸ್ ನಡಿ ಸಿಲುಕಿದ ಕಾರು ಚಾಲಕ ದುರ್ಮರಣ

BREAKING NEWS: ಬಸ್-ಕಾರು ಭೀಕರ ಅಪಘಾತ: ಪಲ್ಟಿಯಾದ ಬಸ್ ನಡಿ ಸಿಲುಕಿದ ಕಾರು ಚಾಲಕ ದುರ್ಮರಣ

ಶಿವಮೊಗ್ಗ: ಖಾಸಗಿ ಬಸ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಅಪಘಾತದಲ್ಲಿ ಕಾರು ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಶಿರಾಳಕೊಪ್ಪ ತಾಲೂಕಿನ ದೇವಿಕೊಪ್ಪ ಬಳಿ ನಡೆದಿದೆ.

ಆನವಟ್ಟಿಯಿಂದ ಶಿವಮೊಗ್ಗ ಕಡೆಗೆ ತೆರಳುತ್ತಿದ್ದ ಬಸ್ ಹಾಗೂ ಆನವಟ್ಟಿ ಕಡೆಗೆ ಬರುತ್ತಿದ್ದ ಕಾರಿನ ನಡುವೆ ಅಪಘಾತ ಸಂಭವಿಸಿದೆ. ಬಸ್ ಹಾಗೂ ಕಾರು ಮುಖಾಮುಖಿ ಡಿಕ್ಕಿಯಾಗಿದ್ದು ತಿರುವಿನಲ್ಲಿ ಬಸ್ ಪಲ್ಟಿಯಾಗಿದೆ. ಬಸ್ ನಡಿ ಕಾರು ಸಿಲುಕಿಕೊಂಡಿದ್ದು, ಕಾರು ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಶಿರಾಳಕೊಪ್ಪ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular