ಮೈಸೂರು : ಮೈಸೂರು ಮಹಾನಗರ ಪಾಲಿಕೆಯಲ್ಲಿ ಪೌರ ಕಾರ್ಮಿಕರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ.
ಈ ಬಗ್ಗೆ ಪಾಲಿಕೆ ಸುತ್ತೋಲೆ ಹೊರಡಿಸಿದ್ದು, ಮೈಸೂರು ಮಹಾನಗರ ಪಾಲಿಕೆಗೆ ಮಂಜೂರಾಗಿರುವ “ಪೌರಕಾರ್ಮಿಕರ ಹುದ್ದೆ” ಗಳ ಪೈಕಿ ನೇರ ನೇಮಕಾತಿಯಡಿ ಖಾಲಿ ಇರುವ “ಪೌರಕಾರ್ಮಿಕರ” ಹುದ್ದೆಗಳಿಗೆ ಕರ್ನಾಟಕ ಮುನಿಸಿಪಲ್ ಕಾರ್ಪೊರೇಷನ್ (ರಾಜ್ಯದ ಪಾಲಿಕೆಗಳ ಪೌರಕಾರ್ಮಿಕರ ನೇಮಕಾತಿ) (ವಿಶೇಷ) ನಿಯಮಗಳು 2022 ರ ರೀತ್ಯಾ ಹಾಗೂ ಸರ್ಕಾರದ ಆದೇಶ ಸಂಖ್ಯೆ: ನಅಇ 171 ಎಂಎನ್ಇ 2022 (ಇ), ದಿನಾಂಕ: 09-03-2023 ರಂತೆ ರಾಜ್ಯದ ಮಹಾನಗರಪಾಲಿಕೆಗಳಿಗೆ (ಬಿಬಿಎಂಪಿ ಹೊರತುಪಡಿಸಿ) ಸಂಖ್ಯಾತಿರಿಕ್ತ (Supernumerary Posts) ಹುದ್ದೆಗಳನ್ನು ಹೊಸದಾಗಿ ಸೃಜಿಸಿ ಆದೇಶ ಹೊರಡಿಸಲಾಗಿರುತ್ತದೆ. ಮುಂದುವರೆದು, ತಿದ್ದುಪಡಿ ಆದೇಶದಲ್ಲಿ ಮೈಸೂರು ಮಹಾನಗರಪಾಲಿಕೆಗೆ 252 ಪೌರಕಾರ್ಮಿಕರ ಸಂಖ್ಯಾತಿರಿಕ್ತ (Supernumerary Posts) ಹುದ್ದೆಗಳನ್ನು ಹಂಚಿಕೆ ಮಾಡಲಾಗಿದ್ದು, ಅದರಂತೆ ಸದರಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ನಿಗಧಿತ ನಮೂನೆಯಲ್ಲಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸುವ ವಿಧಾನ
ಅಧಿಸೂಚನೆಯ ಪ್ರತಿಯನ್ನು ಹಾಗೂ ನಿಗಧಿತ ಅರ್ಜಿ ನಮೂನೆಯನ್ನು ಮೈಸೂರು ಮಹಾನಗರ ಪಾಲಿಕೆಯ ಕೇಂದ್ರ ಕಚೇರಿಯಿಂದ ಪಡೆದು, ತಮಗೆ ಅನ್ವಯಿಸುವ ಎಲ್ಲಾ ಅಂಕಣಗಳನ್ನು ಭರ್ತಿ ಮಾಡುವುದು.
ಅಭ್ಯರ್ಥಿಯು ತನ್ನ ಇತ್ತೀಚಿನ ಪಾಸ್ಪೋರ್ಟ್ ಅಳತೆಯ ಭಾವಚಿತ್ರವನ್ನು ಅರ್ಜಿಯ ಮೇಲೆ ಅಂಟಿಸಿ, ಅದರ ಮೇಲೆ ಸಹಿ ಅಥವಾ ಎಡಗೈ ಹೆಬ್ಬೆಟ್ಟಿನ ಗುರುತು ಮಾಡುವುದು ಹಾಗೂ ಅರ್ಜಿಯ ನಮೂನೆಯ ಕೊನೆಯಲ್ಲಿ ಘೋಷಣೆಯ ನಂತರ ಸಹಿ/ಹೆಬ್ಬೆಟ್ಟಿನ ಗುರುತು ಮಾಡುವುದು.
ಹುದ್ದೆಗೆ ಸಂಬಂಧಿಸಿದ ವಿದ್ಯಾರ್ಹತೆ, ವಯಸ್ಸು ಮತ್ತು ಕೋರಿರುವ ಮೀಸಲಾತಿಗೆ ಸಂಬಂಧಿಸಿದಂತೆ ಪ್ರಮಾಣ ಪತ್ರಗಳನ್ನು ಸಕ್ಷಮ ಪ್ರಾಧಿಕಾರಿಗಳಿಂದ ಪಡೆದು, ಅವುಗಳ ನಕಲು ಪ್ರತಿಗಳನ್ನು ಸಂಬಂಧಪಟ್ಟ ಶಾಖಾ ಮುಖ್ಯಸ್ಥರಿಂದ ಧೃಡೀಕರಿಸಿ ಅರ್ಜಿಯೊಂದಿಗೆ ಲಗತ್ತಿಸಿ ಅರ್ಜಿಯನ್ನು ಅಧ್ಯಕ್ಷರು, ಆಯ್ಕೆ ಮತ್ತು ನೇರ ನೇಮಕಾತಿ ಪ್ರಾಧಿಕಾರ ಹಾಗೂ ಆಯುಕ್ತರು ಮೈಸೂರು ಮಹಾನಗರ ಪಾಲಿಕೆ ಮೈಸೂರು ಇವರಿಗೆ ದಿನಾಂಕ : 18-07-2024 ರ ಸಂಜೆ 5-30 ಗಂಟೆಯೊಳಗೆ ನೇರವಾಗಿ ಸಲ್ಲಿಸಿ ಸ್ವೀಕೃತಿ ಪಡೆಯತಕ್ಕದ್ದು. ಅಂಚೆ ಮೂಲಕ ಅಥವಾ ಪ್ರತ್ಯೇಕವಾಗಿ ಸಲ್ಲಿಸಲು ಅವಕಾಶವಿರುವುದಿಲ್ಲ. ಅವಧಿ/ಸಮಯ ಮೀರಿ ಬಂದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಪ್ರಕಟಣೆ ತಿಳಿಸಿದೆ.