ಚಾಮರಾಜನಗರ: ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಮೊಪೆಡ್ ವಾಹನ ಡಿಕ್ಕಿಯಾಗಿ ಮೊಪೆಡ್ ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆಯ ಬಸವಟ್ಟಿ ಗೇಟ್ ಬಳಿ ನಡೆದಿದೆ.
ಕಮರವಾಡಿ ಗ್ರಾಮದ ಕಿಶೋರ್ (48) ಮಹೇಶ್ (40) ಮೃತರು. ಘಟನಾ ಸ್ಥಳಕ್ಕೆ ಸಂತೇಮರಳ್ಳಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಸಂತೇಮರಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.