HomeKarnatakaBREAKING : ರೇಣುಕಾಸ್ವಾಮಿ ಕೊಲೆ ಕೇಸ್ ; ನಟ ದರ್ಶನ್ & ಗ್ಯಾಂಗ್ ಗೆ ಜು....

BREAKING : ರೇಣುಕಾಸ್ವಾಮಿ ಕೊಲೆ ಕೇಸ್ ; ನಟ ದರ್ಶನ್ & ಗ್ಯಾಂಗ್ ಗೆ ಜು. 18 ರವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ..!

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ & ಗ್ಯಾಂಗ್ ಗೆ ಜುಲೈ 18 ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್ ಆದೇಶ ಹೊರಡಿಸಿದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ & ಗ್ಯಾಂಗ್ ಇಂದು ವಿಡಿಯೋ ಕಾನ್ಪರೆನ್ಸ್ ಮೂಲಕ ವಿಚಾರಣೆಗೆ ಹಾಜರಾಗಿದ್ದು, ವಿಚಾರಣೆ ನಡೆಸಿದ ಕೋರ್ಟ್ ಜುಲೈ 18 ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿ ಬೆಂಗಳೂರಿನ ಆರ್ಥಿಕ ಅಪರಾ‍ಧಗಳ ನ್ಯಾಯಾಲಯ ಆದೇಶಿಸಿದೆ.

ಈ ಪ್ರಕರಣದಲ್ಲಿ ದರ್ಶನ್ ಗೆ ಸದ್ಯಕ್ಕೆ ಬೇಲ್ ಸಿಗುವ ಸಾಧ್ಯತೆ ಬಹಳ ಕಡಿಮೆ ಎಂದು ಹೇಳಲಾಗುತ್ತಿದೆ. 90 ದಿನದೊಳಗೆ ಪ್ರಕರಣದ ಬಗ್ಗೆ ಚಾರ್ಜ್ ಶೀಟ್ ಸಲ್ಲಿಸಲು ಪೊಲೀಸರಿಗೆ ಅವಕಾಶವಿದ್ದು, ಅಷ್ಟರೊಳಗೆ ಪೊಲೀಸರು ಚಾರ್ಜ್ ಶೀಟ್ ಸಲ್ಲಿಕೆ ಮಾಡಲಿದ್ದಾರೆ.ದರ್ಶನ್ & ಗ್ಯಾಂಗ್ ನಿಂದ ಕೊಲೆಯಾದ ರೇಣುಕಾಸ್ವಾಮಿ ಪ್ರಕರಣ ಎಲ್ಲರನ್ನೂ ಬೆಚ್ಚಿ ಬೀಳಿಸಿದೆ. ಕೊಲೆ ಪ್ರಕರಣದಲ್ಲಿ ನಟ ದರ್ಶನ್ & ಗ್ಯಾಂಗ್ ಪರಪ್ಪನ ಅಗ್ರಹಾರದಲ್ಲಿ ಬಂಧಿಯಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular