ಡಿಜಿಟಲ್ ಡೆಸ್ಕ್ : ಬಾಲ ನಟ, ನಟಿಯಾಗಿ ನಟನಾ ಕೆಲಸ ನಿರ್ವಹಿಸುವ ಚಟುವಟಿಕೆಗಳನ್ನು ಹೊರತುಪಡಿಸಿ, ಕಾಯ್ದೆಯು ಎಲ್ಲಾ ಉದ್ಯೋಗ ಮತ್ತು ಪ್ರಕ್ರಿಯೆಗಳಲ್ಲಿ 14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳನ್ನು ಕೆಲಸಕ್ಕೆ ನಿಯೋಜಿಸಿಕೊಳ್ಳುವುದನ್ನು ಸಂಪೂರ್ಣವಾಗಿ ನಿಷೇಧಿಸಿದೆ.
ಬಾಲ ಹಾಗೂ ಕಿಶೋರ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ, 1986 ರನ್ವಯ ಮಕ್ಕಳ ಶಿಕ್ಷಣದ ಹಕ್ಕಿಗೆ ಮಾರಕವಾಗದಂತೆ ಬಾಲ ನಟ, ನಟಿಯಾಗಿ ನಟನಾ ಕೆಲಸ ನಿರ್ವಹಿಸುವ ಚಟುವಟಿಕೆಗಳನ್ನು ಹೊರತುಪಡಿಸಿ, ಕಾಯ್ದೆಯು ಎಲ್ಲಾ ಉದ್ಯೋಗ ಮತ್ತು ಪ್ರಕ್ರಿಯೆಗಳಲ್ಲಿ 14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳನ್ನು ಕೆಲಸಕ್ಕೆ ನಿಯೋಜಿಸಿಕೊಳ್ಳುವುದನ್ನು ಸಂಪೂರ್ಣವಾಗಿ ನಿಷೇಧಿಸಿದೆ ಹಾಗೂ ಕಾಯ್ದೆಯು 14 ರಿಂದ 18 ವಯಸ್ಸಿನ ಮಕ್ಕಳನ್ನು ಅಪಾಯಕಾರಿ ಉದ್ದಿಮೆಗಳಲ್ಲಿ ಕೆಲಸಕ್ಕೆ ನಿಯೋಜಿಸಿಕೊಳ್ಳುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಕೊಡಗು ಉಪ ವಿಭಾಗದ ಕಾರ್ಮಿಕ ಅಧಿಕಾರಿ ಹರ್ಷವರ್ಧನ ಅವರು ತಿಳಿಸಿದ್ದಾರೆ.