HomeKarnatakaಕಟ್ಟಡ ಕಾಮಗಾರಿ ವೇಳೆ ಮಣ್ಣು ಕುಸಿತ ಪ್ರಕರಣ; ಮೂವರ ವಿರುದ್ಧ FIR ದಾಖಲು; ಕಾಂಟ್ರ್ಯಾಕ್ಟರ್ ಪೊಲೀಸ್...

ಕಟ್ಟಡ ಕಾಮಗಾರಿ ವೇಳೆ ಮಣ್ಣು ಕುಸಿತ ಪ್ರಕರಣ; ಮೂವರ ವಿರುದ್ಧ FIR ದಾಖಲು; ಕಾಂಟ್ರ್ಯಾಕ್ಟರ್ ಪೊಲೀಸ್ ವಶಕ್ಕೆ

ಮಂಗಳೂರು: ಮಂಗಳೂರಿನಲ್ಲಿ ಕಟ್ಟಡ ಕಾಮಗಾರಿ ವೇಳೆ ಮಣ್ಣು ಕುಸಿತಗೊಂಡು ಓರ್ವ ಕಾರ್ಮಿಕ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಕಟ್ಟಡ ಕಾಮಗಾರಿ ಗುತ್ತಿಗೆದಾರ, ಸೂಪರ್ ವೈಸರ್ ಸೇರಿದಂತೆ ಮೂವರ ವಿರುದ್ಧ ಮಂಗಳೂರಿನ ಕದ್ರಿ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ. ಹರ್ಷವರ್ಧನ್, ಸೈಟ್ ಇನ್ ಚಾರ್ಜ್ ನಾಗರಾಜ್ ಹಾಗೂ ಕಾಮಗಾರಿ ಸ್ಥಳದ ಮುಖ್ಯಸ್ಥ ಸಂತೋಷ್ ಎಂಬುವವರ ವಿರುದ್ಧ ಪ್ರಕರಣ ದಾಖಲಾಗಿದೆ.

ಘಟನೆಯಲ್ಲಿ ಬದುಕುಳಿದ ಬಿಹಾರ ಮೂಲದ ಕಾರ್ಮಿಕ ನೀಡಿದ ದೂರಿನ ಮೇಲೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಇದೇ ವೇಳೆ ಲೇಬರ್ ಕಾಂಟ್ರ್ಯಾಕ್ಟರ್ ವೇಣುಗೋಪಾಲ್ ಎಂಬುವವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಜುಲೈ 3ರಂದು ಮಂಗಳೂರಿನ ಬಲ್ಮಠ ಬಳಿ ಕಟ್ಟಡ ಕಾಮಗಾರಿ ವೇಳೆ ಮಣ್ಣು ಕುಸಿದು ದುರಂತ ಸಂಭವಿಸಿತ್ತು.

For Latest News Updates, Join Our Whatsapp Community🚩
RELATED ARTICLES

Most Popular