HomeKarnatakaಗಮನಿಸಿ : ಆರ್ಥಿಕ ಸಂಕಷ್ಟದಲ್ಲಿರುವ ಕಲಾವಿದರಿಂದ ಮಾಸಾಶನಕ್ಕೆ ಅರ್ಜಿ ಆಹ್ವಾನ

ಗಮನಿಸಿ : ಆರ್ಥಿಕ ಸಂಕಷ್ಟದಲ್ಲಿರುವ ಕಲಾವಿದರಿಂದ ಮಾಸಾಶನಕ್ಕೆ ಅರ್ಜಿ ಆಹ್ವಾನ

ಶಿವಮೊಗ್ಗ :ಜಿಲ್ಲಾ ಕನ್ನಡ ಮತ್ತು ಸಂಸ್ಕತಿ ಇಲಾಖೆಯು ಜಿಲ್ಲಾ ವ್ಯಾಪ್ತಿಯಲ್ಲಿ ಆರ್ಥಿಕವಾಗಿ ಸಂಕಷ್ಟದಲ್ಲಿರುವ 58 ವರ್ಷ ತುಂಬಿರುವ ಪುರುಷ/ಮಹಿಳಾ/ಅಂಗವಿಕಲ ಕಲಾವಿದರುಗಳಿಂದ ಮಾಸಾಶನಕ್ಕಾಗಿ ಅರ್ಜಿ ಆಹ್ವಾನಿಸಿದೆ.

ಆಸಕ್ತ ಕಲಾವಿದರು ಅರ್ಜಿ ನಮೂನೆಯನ್ನು ಕನ್ನಡ ಮತ್ತು ಸಂಸ್ಕತಿ ಇಲಾಖೆಯ ಕಚೇರಿಯನ್ನು ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಸೂಕ್ತ ದಾಖಲಾತಿಗಳೊಂದಿಗೆ ಸಲ್ಲಿಸುವುದು.

ಕಲಾವಿದರು ಕನಿಷ್ಠ 25 ವರ್ಷಗಳಿಂದ ಕಲಾ ಸೇವೆಯಲ್ಲಿ ತೊಡಗಿಸಿಕೊಂಡಿರುವ ದಾಖಲಾತಿ ಹಾಗೂ ರೂ. 1.00 ಲಕ್ಷದೊಳಗಿನ ಆದಾಯ ಪ್ರಮಾಣ ಪತ್ರ ಹೊಂದಿದ್ದು, ಇಂತಹ ಕಲಾವಿದರು ಸರ್ಕಾರದಿಂದ ಇತರೆ ಯಾವುದೇ ಪಿಂಚಣಿಯನ್ನು ಪಡೆಯುತ್ತಿರಬಾರದು ಎಂದು ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಹೆಚ್ಚಿನ ಮಾಹಿತಿಗಾಗಿ ದೂ.ಸಂ.: 08182-223354 ನ್ನು ಸಂಪರ್ಕಿಸುವುದು ಎಂದು ಪ್ರಕಟಣೆ ತಿಳಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular